ಪ್ರಾತಿನಿಧಿಕ ಚಿತ್ರ
ಬೆಂಗಳೂರು: ತುಂಗಭದ್ರಾ ನದಿಯನ್ನು ಸ್ವಚ್ಛಗೊಳಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ರೂಪಿಸಬೇಕು ಎಂದು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಹಾಗೂ ಪರ್ಯಾವರಣ ಟ್ರಸ್ಟ್ ಆಗ್ರಹಿಸಿದೆ.
ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ತುಂಗಭದ್ರಾ ರಕ್ಷಿಸುವ ಅಭಿಯಾನದ ಸಮೀಕ್ಷಾ ವರದಿ ಬಿಡುಗಡೆಗೊಳಿಸಿ ಮಾತನಾಡಿದ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ರಾಷ್ಟ್ರೀಯ ಘಟಕದ ಅಧ್ಯಕ್ಷ ಬಸವರಾಜ, ‘ತುಂಗಭದ್ರಾ ನದಿಯ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ 2024ರ ನವೆಂಬರ್ ಹಾಗೂ ಡಿಸೆಂಬರ್‌ನಲ್ಲಿ ಶೃಂಗೇರಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ಬಳಿಯ ಕಿಷ್ಕಿಂಧೆವರೆಗೆ ಪಾದಯಾತ್ರೆ ನಡೆಸಿ, ಸಾರ್ವಜನಿಕರಲ್ಲಿ ತುಂಗಭದ್ರಾ ನದಿಗೆ ಸಂಬಂಧಿಸಿದಂತೆ ಜಲಜಾಗೃತಿ ಮೂಡಿಸಲಾಯಿತು’ ಎಂದು ಹೇಳಿದರು.
‘ತುಂಗಾಭದ್ರಾ ನದಿ ತೀರದ ಹಳ್ಳಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಏಳು ಜಿಲ್ಲೆಗಳಲ್ಲಿ ಒಟ್ಟು 430 ಕಿ.ಮೀ ಪಾದಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ನದಿ ನೀರು ಕಲುಷಿತವಾಗಲು ಕಾರಣಗಳೇನು, ನದಿ ಸ್ವಚ್ಛಗೊಳಿಸುವ ಪರಿಹಾರ ಕ್ರಮಗಳ ಬಗ್ಗೆ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ತಿಳಿಸಿದರು.
ಪರಿಸರ ತಜ್ಞ ಬಿ.ಎಂ. ಕುಮಾರಸ್ವಾಮಿ, ವಿಜ್ಞಾನಿ ಶ್ರೀಪತಿ, ಶಿವಮೊಗ್ಗ ನಗರಸಭೆಯ ಮಾಜಿ ಅಧ್ಯಕ್ಷ ಎಂ. ಶಂಕರ್ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.