ADVERTISEMENT

ಜಲಸ್ಪಂದನ: 176 ದೂರು ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 19:43 IST
Last Updated 14 ಅಕ್ಟೋಬರ್ 2019, 19:43 IST

ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಸಮಸ್ಯೆಗಳಿಗೆ ಸ್ಪಂದಿಸಲು ಜಲಮಂಡಳಿಯು ತನ್ನ 15 ಕಚೇರಿಗಳಲ್ಲಿ ಶನಿವಾರ ‘ಜಲಸ್ಪಂದನ’ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ನೀರು ಸರಬರಾಜು ಮತ್ತು ಒಳಚರಂಡಿ ಸಮಸ್ಯೆ ಅಲ್ಲದೆ, ಹೊಸದಾಗಿ ಕೊಳವೆ ಅಳವಡಿಸುವ ಕುರಿತು ಮತ್ತು ಇತರೆ ವಿಷಯ ಸೇರಿ ಒಟ್ಟು 176 ದೂರುಗಳು ಸಲ್ಲಿಕೆಯಾದವು. ಮಂಡಳಿಯ ಅಧ್ಯಕ್ಷ ತುಷಾರ್‌ ಗಿರಿನಾಥ್‌, ಮಹದೇವಪುರ ವ್ಯಾಪ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ಥಳೀಯರ ಅಹವಾಲು ಆಲಿಸಿದರು.

ಸ್ಥಳೀಯರಿಂದ ದೂರನ್ನು ಸ್ವೀಕರಿಸಿ, ಸಮಸ್ಯೆಯ ತೀವ್ರತೆಗೆ ಅನುಗುಣವಾಗಿ ತುರ್ತಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ADVERTISEMENT

ಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್‌ ಕೆಂಪರಾಮಯ್ಯ ಮತ್ತು ಇತರೆ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು. ಪ್ರತಿ ಎರಡನೇ ಶನಿವಾರ ಈ ಎಲ್ಲ 15 ಸ್ಥಳಗಳಲ್ಲಿ ಜಲಸ್ಪಂದನ ನಡೆಯುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.