ADVERTISEMENT

ಚಕ್ಕೆರೆ ಶಿವಶಂಕರ್ ಸೇರಿ 19 ಮಂದಿಗೆ ‘ಜಾನಪದ ಲೋಕ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2025, 19:56 IST
Last Updated 5 ಫೆಬ್ರುವರಿ 2025, 19:56 IST
   

ರಾಮನಗರ: ಜಾನಪದ ವಿದ್ವಾಂಸ ಡಾ. ಚಕ್ಕೆರೆ ಶಿವಶಂಕರ್ ಸೇರಿ 19 ಸಾಧಕರು ಕರ್ನಾಟಕ ಜಾನಪದ ಪರಿಷತ್ತು ನೀಡುವ ‘ಜಾನಪದ ಲೋಕ’ ಪ್ರಶಸ್ತಿಗೆ ಈ ಬಾರಿ ಭಾಜನರಾಗಿದ್ದಾರೆ.

ಜಾನಪದ ಲೋಕದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರು ಪ್ರಕಟಿಸಿದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ. ಬೋರಲಿಂಗಯ್ಯ, ಪ್ರಶಸ್ತಿ ₹10 ಸಾವಿರದಿಂದ ₹25 ಸಾವಿರದವರೆಗಿನ ನಗದು ಪುರಸ್ಕಾರ ಹಾಗೂ ಫಲಕ ಒಳಗೊಂಡಿದೆ ಎಂದು ಹೇಳಿದರು.

ಫೆ.8 ಮತ್ತು 9ರಂದು ಜಾನಪದ ಲೋಕದಲ್ಲಿ ನಡೆಯುವ ಎರಡು ದಿನಗಳ ಮಹಿಳಾ ಜಾನಪದ ಲೋಕೋತ್ಸವ ಕಾರ್ಯಕ್ರಮ ನಡೆಯಲಿದೆ.  9ರಂದು ಸಂಜೆ 5.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ಜಾನಪದ ಲೋಕದ ಕ್ಯುರೇಟರ್ ಡಾ. ರವಿ ಯು.ಎಂ., ಕಾರ್ಯನಿರ್ವಹಣಾಧಿಕಾರಿ ಸರಸವಾಣಿ, ಸಂಶೋಧನಾ ಸಂಚಾಲಕ ಸಂದೀಪ್ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.