ADVERTISEMENT

ಆಂಬಿಡೆಂಟ್ ಪ್ರಕರಣ: ಜನಾರ್ದನ ರೆಡ್ಡಿ-–ಅಲಿಖಾನ್ ವಿರುದ್ಧ ಕ್ರಮ ಬೇಡ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2018, 18:43 IST
Last Updated 4 ಡಿಸೆಂಬರ್ 2018, 18:43 IST

ಬೆಂಗಳೂರು: ಆಂಬಿಡೆಂಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರಿಗೆ ಈ ಮೊದಲು ನೀಡಿದ್ದ ನಿರ್ದೇಶನವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ.

‘ನನ್ನ ವಿರುದ್ಧ ಸಿಸಿಬಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಪಡಿಸಬೇಕು’ ಎಂದು ಕೋರಿ ಜನಾರ್ದನ ರೆಡ್ಡಿ ಮತ್ತು ಅವರ ಆಪ್ತ ಅಲಿಖಾನ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ‘ದೂರುದಾರರಿಗೆ ಕೋರ್ಟ್ ನೋಟಿಸ್ ಜಾರಿಯಾಗಿಲ್ಲ’ ಎಂಬ ಕಾರಣಕ್ಕೆ ವಿಚಾರಣೆ ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT