ADVERTISEMENT

ಜನಸ್ಪಂದನ: ದೂರುಗಳಿಗೆ ಅಧಿಕಾರಿಗಳಿಂದ ಸ್ಪಂದನ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 19:08 IST
Last Updated 8 ಫೆಬ್ರುವರಿ 2023, 19:08 IST
ವಾಜರಹಳ್ಳಿ ಮೆಟ್ರೊ ರೈಲು ನಿಲ್ದಾಣದ ಬಳಿ ಪಾದಚಾರಿ ಮಾರ್ಗದ ದುರಸ್ತಿ ಕಾಮಗಾರಿಯನ್ನು ಬಿಬಿಎಂಪಿ ಆರಂಭಿಸಿರುವುದು
ವಾಜರಹಳ್ಳಿ ಮೆಟ್ರೊ ರೈಲು ನಿಲ್ದಾಣದ ಬಳಿ ಪಾದಚಾರಿ ಮಾರ್ಗದ ದುರಸ್ತಿ ಕಾಮಗಾರಿಯನ್ನು ಬಿಬಿಎಂಪಿ ಆರಂಭಿಸಿರುವುದು   

ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್‌’ ಫೆಬ್ರುವರಿ 4ರಂದು ಆಯೋಜಿಸಿದ್ದ ‘ಜನಸ್ಪಂದನ’ದಲ್ಲಿ ಜನ ಹೇಳಿಕೊಂಡ ಕುಂದುಕೊರತೆಗಳಲ್ಲಿ ಬಿಬಿಎಂಪಿ ಮತ್ತು ಬೆಸ್ಕಾಂ ಅಧಿಕಾರಿಗಳು ಹಲವು ಕೊರತೆಗಳನ್ನು ನೀಗಿಸಿದ್ದಾರೆ.

ತುರಹಳ್ಳಿ ರಸ್ತೆಯಲ್ಲಿರುವ ಶೋಭ ಫಾರೆಸ್ಟ್‌ ವ್ಯೂ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ‘ಚೇಂಜ್ ಮೇಕರ್ಸ್ ಆಫ್ ಕನಕಪುರ ರೋಡ್’ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಬಡಾವಣೆಗಳ ನಿವಾಸಿಗಳು, ಬೀದಿ ದೀಪ, ಪಾದಚಾರಿ ಮಾರ್ಗ ಸೇರಿ ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದರು.

ವಾಜರಹಳ್ಳಿ ಮೆಟ್ರೊ ನಿಲ್ದಾಣದ ಬಳಿ ಹಾಳಾಗಿದ್ದ ಪಾದಚಾರಿ ಮಾರ್ಗವನ್ನು ಜನಸ್ಪಂದನ ಕಾರ್ಯಕ್ರಮ ನಡೆದ ಮರುದಿನವೇ ಸರಿಪಡಿಸುವ ಕಾರ್ಯ ಆರಂಭಿಸಲಾಗಿದೆ.

ADVERTISEMENT

ಹಾಲಿಡೇ ವಿಲೇಜ್ ರಸ್ತೆಯಲ್ಲಿ ಹಾಳಾಗಿದ್ದ ವಿದ್ಯುತ್‌ ಕಂಬದ ಎಂಸಿಬಿ(ಮಿನಿಯೇಚರ್ ಸರ್ಕ್ಯೂಟ್ ಬ್ರೇಕರ್) ಬದಲಿಸಲಾಗಿದ್ದು, ಬೀದಿ ದೀಪಗಳು ಕಾರ್ಯನಿರ್ವಹಿಸುತ್ತಿವೆ.

ಟ್ರಿಂಕೊ ಲೇಔಟ್‌ನಲ್ಲಿ ಬಿಬಿಎಂಪಿ ಬೈಲಾ ಉಲ್ಲಂಘಿಸಿ ಕಟ್ಟುತ್ತಿರುವ ಕಟ್ಟಡಗಳಿಗೆ ಸೋಮವಾರವೇ ಬಿಬಿಎಂಪಿ ನೋಟಿಸ್ ನೀಡಿದೆ. ಶೋಭ ಫಾರೆಸ್ಟ್ ವ್ಯೂ ಅಪಾರ್ಟ್‌ಮೆಂಟ್‌ ಸಮುಚ್ಚಯದ ಹಿಂಬದಿಯಲ್ಲಿನ ಬನಶಂಕರಿ 6ನೇ ಬ್ಲಾಕ್‌ನಲ್ಲಿ ಟೈಮರ್ ಸಹಿತ ಎಇಡಿ ಬೀದಿ ದೀಪಗಳನ್ನು ಅಳವಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.