ಬೆಂಗಳೂರು:‘ಬಿಬಿಎಂಪಿ ವಾರ್‌ರೂಂಗಳು ಹಾಸಿಗೆ ಬ್ಲಾಕ್ ದಂಧೆಯಲ್ಲಿ ತೊಡಗಿದ್ದು, ಸಾವಿರಾರು ಹಾಸಿಗೆಗಳನ್ನು ಅಕ್ರಮವಾಗಿ ಕಾಯ್ದಿರಿಸಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು’ ಎಂದುಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಸಮಿತಿ ಆಗ್ರಹಿಸಿದೆ.
‘ಸತ್ಯವನ್ನು ಬಯಲಿಗೆಳೆಯಲು ನ್ಯಾಯಾಂಗ ತನಿಖೆಯೊಂದೇ ಮಾರ್ಗ.ಆಸ್ಪತ್ರೆಗಳಲ್ಲಿ ದಾಖಲಾದ ಮತ್ತು ಬಿಡುಗಡೆಯಾದ ರೋಗಿಗಳ ಪಟ್ಟಿಯ ಜೊತೆ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ವಿವರಗಳನ್ನು ನೀಡಬೇಕು’ ಎಂದು ಸಂಘಟನೆಯ ರಾಜ್ಯ ಸಮಿತಿ ಅಧ್ಯಕ್ಷೆ ದೇವಿ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.