ADVERTISEMENT

ಸ್ವಸಹಾಯ ಸಂಘಗಳ ಸಾಲ ಮನ್ನಾಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 9:17 IST
Last Updated 30 ಜೂನ್ 2020, 9:17 IST

ಬೆಂಗಳೂರು: ‘ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಪಡೆದಿರುವ ಸಾಲವನ್ನು ಸರ್ಕಾರ ಬಡ್ಡಿ ಸಹಿತ ಮನ್ನಾ ಮಾಡಬೇಕು’ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸಿದೆ.

’ರಾಜ್ಯದಲ್ಲಿ ಸಾವಿರಾರು ಸ್ವಸಹಾಯ ಸಂಘಗಳಿವೆ. 30 ಲಕ್ಷದಿಂದ 40 ಲಕ್ಷ ಮಹಿಳೆಯರು ಇಲ್ಲಿ ಸದಸ್ಯರಾಗಿದ್ದಾರೆ. ಸ್ವಯಂ ಉದ್ಯೋಗ, ಕೃಷಿ ಚಟುವಟಿಕೆ, ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಮತ್ತು ಕುಟುಂಬ ನಿರ್ವಹಣೆಗೆ ಸಾಲ ಪಡೆದಿದ್ದಾರೆ. ಒಂದೇ ಒಂದು ಕಂತನ್ನೂ ತಪ್ಪದೆ ಮರುಪಾವತಿ ಮಾಡಿಕೊಂಡು ಬಂದಿದ್ದಾರೆ’ ಎಂದು ಸಂಘಟನೆಯ ರಾಜ್ಯ ಸಮಿತಿ ಅಧ್ಯಕ್ಷೆ ದೇವಿ ಮತ್ತು ಪ್ರಧಾನ ಕಾರ್ಯದರ್ಶಿ ಗೌರಮ್ಮ ವಿವರಿಸಿದ್ದಾರೆ.

‘ದಿನವೂ ದುಡಿದು ತಿನ್ನುವವರೇ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಿದ್ದು, ಲಾಕ್‌ಡೌನ್ ಪರಿಣಾಮ ಹೊಟ್ಟೆಪಾಡಿಗೂ ಪರದಾಡುವ ಸ್ಥಿತಿಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಸಾಲ ಮರುಪಾವತಿಗೆ ಹಿಂಸಿಸುತ್ತಿರುವ ಬ್ಯಾಂಕ್ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

‘ಸಾಲಗಳ ಮೇಲಿನ ಬಡ್ಡಿಯಲ್ಲಿ ಶೇ 75ರಷ್ಟನ್ನು ಕೇಂದ್ರ ಮತ್ತು ಶೇ 25ರಷ್ಟನ್ನು ರಾಜ್ಯ ಸರ್ಕಾರ ಭರಿಸಬೇಕು. ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಕೂಡಲೇ ಸಾಲ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.