ADVERTISEMENT

ಜಯಚಂದ್ರಗೆ ‘ಬಿ.ಎಂ.ಶ್ರೀ. ಪ್ರತಿಷ್ಠಾನ ದತ್ತಿ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 18 ಜುಲೈ 2024, 15:43 IST
Last Updated 18 ಜುಲೈ 2024, 15:43 IST
ಎಂ.ಎ. ಜಯಚಂದ್ರ
ಎಂ.ಎ. ಜಯಚಂದ್ರ   

ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನ ನೀಡುವ ‘ಕಂಬತ್ತಳ್ಳಿ ಜೀವಣ್ಣ ಪದ್ಮಾವತಮ್ಮ ಪ್ರಶಸ್ತಿ’ಗೆ ಸಾಹಿತಿ ಎಂ.ಎ. ಜಯಚಂದ್ರ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಕೆ.ಜೆ. ಪಾರ್ಶ್ವನಾಥ ಅವರು ತಮ್ಮ ತಂದೆ–ತಾಯಿ ಹೆಸರಿನಲ್ಲಿ ಈ ಪ್ರಶಸ್ತಿ ಸ್ಥಾಪಿಸಿದ್ದಾರೆ. ಜೈನ ಧರ್ಮ ಮತ್ತು ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಸಾಹಿತಿ ಅಥವಾ ಸಂಶೋಧಕರೊಬ್ಬರನ್ನು ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ. ಸಾಹಿತಿ ಹಂ.ಪ. ನಾಗರಾಜಯ್ಯ, ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ, ಪ್ರಕಾಶ್ ಕಂಬತ್ತಳ್ಳಿ ಹಾಗೂ ಶಾಂತರಾಜು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ. 

ಇದೇ 21ರಂದು ಬಿ.ಎಂ.ಶ್ರೀ. ಪ್ರತಿಷ್ಠಾನದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಹಂ.ಪ. ನಾಗರಾಜಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.