ADVERTISEMENT

ಜಯದೇವ ಆಸ್ಪತ್ರೆ | ಜುಲೈ 19ಕ್ಕೆ ಡಾ. ಮಂಜುನಾಥ್ ಸೇವಾವಧಿ ಮುಕ್ತಾಯ

​ಪ್ರಜಾವಾಣಿ ವಾರ್ತೆ
Published 15 ಜುಲೈ 2023, 16:27 IST
Last Updated 15 ಜುಲೈ 2023, 16:27 IST
 ಡಾ.ಸಿ.ಎನ್. ಮಂಜುನಾಥ್
 ಡಾ.ಸಿ.ಎನ್. ಮಂಜುನಾಥ್   

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿ ಇದೇ 19ಕ್ಕೆ ಮುಕ್ತಾಯಗೊಳ್ಳಲಿದೆ. 

ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರೂ ಆದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಇದೇ ಸೋಮವಾರ ಸಭೆ ನಡೆಯಲಿದ್ದು, ಮಂಜುನಾಥ್ ಅವರ ಮುಂದುವರಿಕೆ ಅಥವಾ ಹೊಸ ನಿರ್ದೇಶಕರ ನೇಮಕದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

2007ರಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಡಾ.ಸಿ.ಎನ್. ಮಂಜುನಾಥ್ ಕಾರ್ಯನಿರ್ವಹಿಸಿದ್ದಾರೆ. ಅವರ ಅವಧಿ ಕಳೆದ ವರ್ಷವೇ ಮುಕ್ತಾಯಗೊಂಡಿತ್ತು. ಆಸ್ಪತ್ರೆ ಸಿಬ್ಬಂದಿ ಒತ್ತಾಯದ ಮೇರೆಗೆ ಒಂದು ವರ್ಷ ಮುಂದುವರಿಸಲಾಗಿತ್ತು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.