ADVERTISEMENT

ರಸ್ತೆ ವಿಸ್ತರಣೆ ವಿಳಂಬ: ಹೈಕೋರ್ಟ್ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 19:33 IST
Last Updated 7 ಜನವರಿ 2021, 19:33 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಬಳ್ಳಾರಿ ರಸ್ತೆಯ ಮೇಕ್ರಿ ವೃತ್ತದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣ ನಡುವಿನ ರಸ್ತೆ ವಿಸ್ತರಣೆ ಸಂಬಂಧ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಿರುವ ಸಂಬಂಧ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ನಗರದ ಸಮರ್ಪಣಾ ಸಾಮಾಜಿಕ-ಸಾಂಸ್ಕೃತಿಕ ಟ್ರಸ್ಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಫೆಬ್ರುವರಿ 15ರೊಳಗೆ ಅನುಪಾಲನಾ ವರದಿ ಸಲ್ಲಿಸಬೇಕು’ ಎಂದು ತಿಳಿಸಿದೆ.

‘ಅಸ್ತಿತ್ವದಲ್ಲಿರುವ ಟಿಡಿಆರ್(ಅಭಿವೃದ್ಧಿ ಹಕ್ಕು) ನಿಯಮಗಳ ಪ್ರಕಾರ ಪ್ರಮಾಣ ಪತ್ರಗಳನ್ನು ನೀಡುವ ಮೂಲಕ ಆಸ್ತಿ ಸ್ವಾಧೀನಪಡಿಸಿಕೊಳ್ಳಲು 2014ರಲ್ಲೇ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. 2016ರಲ್ಲಿ ಹೈಕೋರ್ಟ್‌ ಕೂಡ ಆದೇಶ ನೀಡಿದೆ. ಆದರೆ, 16 ಎಕರೆ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಆಡಳಿತಾತ್ಮಕ ಅನುಮೋದನೆಯನ್ನು ಮಾತ್ರ ನೀಡಿದೆ. ಪ್ರಕ್ರಿಯೆ ಮುಂದುವರಿಸಿಲ್ಲ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.