ADVERTISEMENT

ಕೋವಿಡ್‌ ಪತ್ತೆ: ಜಯನಗರ ಅಂಚೆ ಕಚೇರಿ ವಹಿವಾಟು ಸ್ಥಗಿತ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 21:09 IST
Last Updated 29 ಜೂನ್ 2020, 21:09 IST

ಬೆಂಗಳೂರು: ಜಯನಗರದ ಪ್ರಧಾನ ಅಂಚೆ ಕಚೇರಿಯ 35 ವರ್ಷದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗಾಗಿ ಈ ಅಂಚೆಕಚೇರಿಯ ವಹಿವಾಟುಗಳನ್ನು ಮೂರು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

‘ನಮ್ಮ ಸಿಬ್ಬಂದಿಯೊಬ್ಬರಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಗುರುವಾರ ಅವರ ಗಂಟಲ ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿದ್ದು, ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ. ಅವರನ್ನು ಶ್ರೀ ಶ್ರೀ ರವಿಶಂಕರ್‌ ಗುರೂಜಿ ಆಯುರ್ವೇದ ಆಸ್ಪತ್ರೆಯ ಕೋವಿಡ್‌ ಆರೈಕೆ ಕೇಂದ್ರಕ್ಕೆ ಕರೆದೊಯ್ಯಲಾಗಿದೆ’ ಎಂದು ಅಂಚೆಕಚೇರಿಯ ಸಿಬ್ಬಂದಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

‘ಬಿಬಿಎಂ‍ಪಿ ಸಿಬ್ಬಂದಿ ಅಂಚೆಕಚೇರಿಗೆ ಸೋಂಕು ನಿವಾರಕ ದ್ರಾವಣವನ್ನು ಸೋಮವಾರ ಸಿಂಪಡಿಸಿದ್ದಾರೆ. ಇಲ್ಲಿನ ಎಲ್ಲ ಸಿಬ್ಬಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.