ADVERTISEMENT

ವೈ.ಎಸ್.ವಿ.ದತ್ತಗೆ ‘ಜಯಪ್ರಕಾಶ್ ನಾರಾಯಣ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 15:31 IST
Last Updated 30 ಸೆಪ್ಟೆಂಬರ್ 2025, 15:31 IST
<div class="paragraphs"><p>ವೈ.ಎಸ್.ವಿ.ದತ್ತ</p></div>

ವೈ.ಎಸ್.ವಿ.ದತ್ತ

   

ಬೆಂಗಳೂರು: ಭಾರತ ಯಾತ್ರಾ ಕೇಂದ್ರ ನೀಡುವ ‘ಲೋಕಮಾನ್ಯ ಜಯಪ್ರಕಾಶ್ ನಾರಾಯಣ ಪ್ರಶಸ್ತಿ’ಗೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಬಿ.ಎಲ್.ಶಂಕರ್ ಮತ್ತು ಬಿ.ಆರ್.ಪಾಟೀಲ ಅವರ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಲೋಕಮಾನ್ಯ ಜಯಪ್ರಕಾಶ್ ನಾರಾಯಣ ಅವರ ಜನ್ಮ ದಿನದ ಅಂಗವಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ. 

ADVERTISEMENT

ಅ.10ರಂದು ಸಂಜೆ 5 ಗಂಟೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರದ ಕಾರ್ಯದರ್ಶಿ ಕೆ.ವಿ.ನಾಗರಾಜಮೂರ್ತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.