ಬೆಂಗಳೂರು: ‘ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರದಿಂದ ₹ 10,000 ಕೋಟಿ ನೆರವು ಒದಗಿಸಲು ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಿದ್ದಾರೆ. ಸರ್ಕಾರ ರಾಜಕೀಯ ಸಂಘರ್ಷ ಬದಿಗಿಟ್ಟು ಈ ಅವಕಾಶ ಬಳಸಿಕೊಳ್ಳಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಸಲಹೆ ನೀಡಿದರು.
ವಿಧಾನಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಸರ್ಕಾರದ ಪ್ರಮುಖರು ಸಂಕುಚಿತ ಮನೋಭಾವ ಬದಿಗಿಟ್ಟು ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಬೇಕು. ಎಚ್‌ಎಂಟಿ ಸೇರಿದಂತೆ ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದರು.
ಬೆಂಗಳೂರು ಸಮೀಪದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾವ ಸರ್ಕಾರದ ಮುಂದಿದೆ. ಅಂತಹ ದುಬಾರಿ ಯೋಜನೆ ಕೈಬಿಟ್ಟು, ಎಚ್‌ಎಎಲ್ ವಿಮಾನ ನಿಲ್ದಾಣವನ್ನೇ ಅಭಿವೃದ್ಧಿಪಡಿಸಬೇಕು. ತೆಂಗು ಬೆಳೆಗಾರರಿಗೆ ನೆರವಾಗಲು ಎಳನೀರನ್ನು ಟೆಟ್ರಾ ಪ್ಯಾಕೆಟ್‌ಗಳಲ್ಲಿ ಮಾರಾಟ ಮಾಡಲು ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.
ಮೀನುಗಾರಿಕಾ ದೋಣಿಗಳಿಗೆ ಸೀಮೆಎಣ್ಣೆ ಸಹಾಯಧನ ಇತ್ತು. ಅದೇ ಮಾದರಿಯಲ್ಲಿ ಪೆಟ್ರೋಲ್ ಖರೀದಿಗೂ ಸಹಾಯಧನ ನೀಡಬೇಕುಡಿ.ವೇದವ್ಯಾಸ ಕಾಮತ್, ಬಿಜೆಪಿ ಶಾಸಕ
ರೈತರ ಕೃಷಿ ಸಾಲ ಮನ್ನಾ ಬಾಬ್ತು ₹ 300 ಕೋಟಿ ಇನ್ನೂ ಬಿಡುಗಡೆ ಆಗಿಲ್ಲ. ಈ ಬಾರಿ ಬಜೆಟ್‌ನಲ್ಲೇ ಅನುದಾನ ಒದಗಿಸಬೇಕುಸಿ.ಎನ್. ಬಾಲಕೃಷ್ಣ, ಜೆಡಿಎಸ್ ಶಾಸಕ
ರಾಜ್ಯದಲ್ಲಿ ಆಯಾ ಜಾತಿ, ಧರ್ಮದ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕುಪಠಾಣ್ ಯಾಸೀರ್ ಅಹ್ಮದ್ ಖಾನ್, ಕಾಂಗ್ರೆಸ್ ಶಾಸಕ
ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರಿಲ್ಲದೆ ಬಾವಿಗಳು ಬತ್ತುತ್ತಿವೆ. ಬೆಂಗಳೂರಿನ ತಾರಾ ಹೋಟೆಲ್‌ಗಳು, ಬಂಗಲೆಗಳಲ್ಲಿ ಈಜು ಕೊಳಗಳು ನೀರಿನಿಂದ ತುಂಬಿವೆಶರಣು ಸಲಗರ ಬಿಜೆಪಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.