ಬೆಂಗಳೂರು: ವಿಧಾನಸೌಧದಲ್ಲಿ ವರದಿ ಮಾಡುವ ಪತ್ರಕರ್ತರಿಗೆ ಕೆಲವು ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಜೆಡಿಎಸ್ ನಗರ ಘಟಕದಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಜೆಡಿಎಸ್ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
‘ಸರ್ಕಾರದ್ದು ಸರ್ವಾಧಿಕಾರಿ ಧೋರಣೆ. ಕಾಂಗ್ರೆಸ್ ಇನ್ನೂ ತುರ್ತು ಪರಿಸ್ಥಿತಿಯ ಮನಃಸ್ಥಿತಿಯಿಂದ ಹೊರ ಬಂದಿಲ್ಲ’ ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯ ಮಾಧ್ಯಮ ನಾಲ್ಕನೇ ಅಂಗವಾಗಿದೆ. ಅದರ ಹೊಣೆಗಾರಿಕೆ ಮಹತ್ವದ್ದು. ಹೀಗಾಗಿ ಕೂಡಲೇ ಈ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದು ಒತ್ತಾಯ ಮಾಡಿದರು.
ಮಾಜಿ ಶಾಸಕ ಕೆ.ಎನ್. ತಿಪ್ಪೇಸ್ವಾಮಿ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.