
ಸಾವು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಾದಚಾರಿ ಮಾರ್ಗದಲ್ಲಿ ನಡೆದು ತೆರಳುತ್ತಿದ್ದ ಮೂವರು ಪಾದಚಾರಿಗಳಿಗೆ ಜೀಪು ಡಿಕ್ಕಿ ಹೊಡೆದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಇಂದಿರಾನಗರದ ಕದಿರಾಯನ ಪಾಳ್ಯದ ನಿವಾಸಿ ರೋಸಿ (51) ಮೃತಪಟ್ಟವರು. ರೋಸಿ ಅವರು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು.
ಗುರುವಾರ ಸಂಜೆ 5ರ ಸುಮಾರಿಗೆ ರೋಸಿ ಅವರು ತಮ್ಮ ಸಂಬಂಧಿಕರೊಬ್ಬರ ಪುತ್ರ ಮಿಥುನ್ ಜತೆಗೆ ನಡೆದು ತೆರಳುತ್ತಿದ್ದರು. ಇವರ ಪಕ್ಕದಲ್ಲೇ ವೃದ್ಧೆ ಶೈಲಜಾ ಎಂಬುವವರೂ ತೆರಳುತ್ತಿದ್ದರು. ಆಗ ಎದುರಿನಿಂದ ಅತಿ ವೇಗದಿಂದ ಬಂದ ಜೀಪು ಮೂವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರೂ ಗಾಯಗೊಂಡಿದ್ದರು. ರೋಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
ಗಾಯಗೊಂಡಿರುವ ವೃದ್ಧೆ ಹಾಗೂ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದರು.
ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಹಲಸೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.