ಚಿನ್ನಾಭರಣ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಕಬ್ಬಿಣದ ಗ್ರಿಲ್ ಅನ್ನು ಗ್ಯಾಸ್ ಕಟರ್‌ನಿಂದ ಕತ್ತರಿಸಿ ಮನೆಯ ಒಳಗೆ ನುಗ್ಗಿದ ಕಳ್ಳರು ₹50 ಲಕ್ಷ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣಗಳನ್ನು ಕಳ್ಳತನ ಮಾಡಿ ಪರಾರಿ ಆಗಿದ್ದಾರೆ.
ಎಸ್‌ಎಸ್‌ಎಫ್ ಬಡಾವಣೆಯ ನಿವಾಸಿ ದುರುಜಸ್ವಾಲ್ ಎಂಬುವರು ಮೇ 5ರಂದು ತಮ್ಮ ಮನೆಗೆ ಬೀಗ ಹಾಕಿಕೊಂಡು ಕೇರಳ ಹಾಗೂ ಮೈಸೂರು ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಮನೆಗೆ ಬಂದು ನೋಡುವಾಗ ಮನೆಯ ಹಿಂದೆ ಅಳವಡಿಸಿದ್ದ ಕಬ್ಬಿಣದ ಗ್ರಿಲ್ ಅನ್ನು ಗ್ಯಾಸ್ ಕಟರ್ ನೆರವಿನಿಂದ ಕತ್ತರಿಸಿ ಮನೆಯ ಒಳಕ್ಕೆ ನುಗ್ಗಿ ಕಳ್ಳತನ ಮಾಡಿರುವುದು ಗೊತ್ತಾಗಿತ್ತು. ಅದಾದ ಮೇಲೆ ಮನೆ ಮಾಲೀಕರು ದೂರು ನೀಡಿದ್ದರು ಎಂದು ಪೊಲೀಸರು ಹೇಳಿದರು.
‘350 ಗ್ರಾಂ ಚಿನ್ನ ಹಾಗೂ ವಜ್ರದ ಆಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ದೂರು ನೀಡಲಾಗಿದೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ಹಾಗೂ ಅಕ್ಕಪಕ್ಕದ ಮನೆಗಳಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯವನ್ನು ಪರಿಶೀಲನೆ ನಡೆಸಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.