ಕೆ.ಆರ್.ಪುರ: ಮಹದೇವಪುರ ಟಾಸ್ಕ್ ಫೋರ್ಸ್ ಸಹಯೋಗದೊಂದಿಗೆ ಸಾಮಾಜಿಕ ಸಬಲೀಕರಣ ಕಾರ್ಯಪಡೆ ವತಿಯಿಂದ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮಹದೇವಪುರ ಬಿಜೆಪಿ ನಗರ ಮಂಡಲ ಸಮಿತಿ ಅಧ್ಯಕ್ಷ ಮನೋಹರ ರೆಡ್ಡಿ ತಿಳಿಸಿದರು.
ಟಾಸ್ಕ್ ಫೋರ್ಸ್ ಅಧ್ಯಕ್ಷ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಮಹದೇವಪುರದ ಚನ್ನಸಂದ್ರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮೈದಾನದಲ್ಲಿ ಶನಿವಾರ ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ 50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ ಎಂದು ಹೇಳಿದರು.
ಪದವೀಧರರು, ಸ್ನಾತಕೋತ್ತರ ಪದವೀಧರರು, ಐಟಿಐ/ಡಿಪ್ಲೋಮಾ ಮತ್ತು ಪದವೀಧರೇತರರು ಎಂದು ವಿಂಗಡಿಸಲಾಗಿದೆ. ಉದ್ಯೋಗಕಾಂಕ್ಷಿಗಳಿಗೆ ಉಚಿತ ಊಟದ ವ್ಯವಸ್ಥೆ ಮಾಡಲಾಗಿದೆ. ನೂರಕ್ಕೂ ಹೆಚ್ಚು ಸ್ವಯಂಸೇವಕರ ಸೇವೆ ಬಳಸಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ಪತ್ರ ನೀಡುವಂತೆ ಕಂಪನಿ ಪ್ರತಿನಿಧಿಗಳಿಗೆ ಕೋರಲಾಗಿದೆ ಎಂದರು.
ಸಾಮಾಜಿಕ ಸಬಲೀಕರಣ ಕಾರ್ಯಪಡೆ ಅಧ್ಯಕ್ಷ ಪಾಪಣ್ಣ, ನಟರಾಜ್, ಪ್ರಸಾದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.