ADVERTISEMENT

ಅಂಗವಿಕಲರಿಗೆ ಉದ್ಯೋಗ ಮೇಳ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2022, 19:52 IST
Last Updated 25 ಫೆಬ್ರುವರಿ 2022, 19:52 IST
ನಗರದಲ್ಲಿ ಅಂಗವಿಕಲರಿಗಾಗಿ ಶುಕ್ರವಾರ ಉದ್ಯೋಗ ಮೇಳ ನಡೆಯಿತು
ನಗರದಲ್ಲಿ ಅಂಗವಿಕಲರಿಗಾಗಿ ಶುಕ್ರವಾರ ಉದ್ಯೋಗ ಮೇಳ ನಡೆಯಿತು   

ಬೆಂಗಳೂರು: ಅಂಗವಿಕಲರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಕೌಶಲ ಅಭಿವೃದ್ಧಿ ಮತ್ತು ಜೀವನೋಪಾಯ ಮತ್ತು ಜೀವನೋಪಾಯ ಇಲಾಖೆ ಹಾಗೂ ಬರ್ಕೆಯ್ಸ್‌ ಸಹಯೋಗದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆಯು ಶುಕ್ರವಾರ ಅಂಗವಿಕಲರಿಗಾಗಿ ಉದ್ಯೋಗ ಮೇಳ ಆಯೋಜಿಸಿತ್ತು.

ಕೋವಿಡ್‌ ನಂತರ ಉದ್ಯೋಗ ಕಳೆದುಕೊಂಡಿರುವವವರಿಗೆ ಮತ್ತು ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ ನೆರವಾಗುವ ಉದ್ದೇಶದಿಂದ ಮೇಳ ಆಯೋಜಿಸಲಾಗಿತ್ತು.

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವೀಧರರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದರು. ಅವಿಘ್ನಾ ಎಂಟರ್‌ಪ್ರೈಸಸ್‌, ವಿ ಮಾರ್ಟ್‌ ರಿಟೇಲ್‌ ಲಿಮಿಟೆಡ್‌, ಬರ್ಗರ್‌ ಕಿಂಗ್‌ ಸೇರಿದಂತೆ 25ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಪಾಲ್ಗೊಂಡಿದ್ದವು. ಸ್ವಂತ ಉದ್ಯಮ ಆರಂಭಿಸಲು ಬಯಸುವವರಿಗೂ ಸಹ ಮಾರ್ಗದರ್ಶನ ನೀಡಲಾಯಿತು ಎಂದು ಸಂಸ್ಥೆ ತಿಳಿಸಿದೆ.

ADVERTISEMENT

ಮೇಳದಲ್ಲಿ ಭಾಗಿಯಾಗಿದ್ದ ಕೌಶಲ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್‌. ಸೇಲ್ವಕುಮಾರ್‌, ‘ಅಂಗವಿಕಲರಿಗೂ ಸಮಾಜದಲ್ಲಿ ಸಮಾನ ಅವಕಾಶಗಳು ದೊರೆಯಬೇಕು. ಸಮರ್ಥನಂ ಸಂಸ್ಥೆ ಈ ನಿಟ್ಟಿನಲ್ಲಿ ಅಂಗವಿಕಲರಿಗೆ ನೆರವಾಗುತ್ತಿರುವುದು ಶ್ಲಾಘನೀಯ. ಸರ್ಕಾರವು ಸಹ ಉಚಿತ ತರಬೇತಿ ಕಾರ್ಯಾಗಾರಗಳ ಮೂಲಕ ಉದ್ಯೋಗ ದೊರಕಿಸಿಕೊಡಲು ನೆರವಾಗುತ್ತಿದೆ’ ಎಂದು ತಿಳಿಸಿದರು. ಅಂಗವಿಕಲರು ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕಿ ಕೆ.ಎಸ್‌. ಲತಾ ಕುಮಾರಿ ಮಾತನಾಡಿ, ‘ಮುಂದಿನ ದಿನಗಳಲ್ಲಿಯೂ ಅಂಗವಿಕಲರಿಗೆ ಉದ್ಯೋಗ ಕಲ್ಪಿಸಲು ಮೇಳಗಳನ್ನು ಆಯೋಜಿಸಲು ನೆರವು ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.