ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಚನ್ನಸಂದ್ರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ ಸಾವಿರಾರು ಉದ್ಯೋಗಾಂಕ್ಷಿಗಳು ಪಾಲ್ಗೊಂಡಿದ್ದರು.
ಸುಮಾರು 70 ಕಂಪನಿಗಳು ಭಾಗವಹಿಸಿದ್ದು, ಮೂರು ಸಾವಿರಕ್ಕೂ ಅಧಿಕ ಉದ್ಯೋಗಕಾಂಕ್ಷಿಗಳು ಭಾಗವಹಿಸಿದ್ದರು. ವಿಶೇಷವಾಗಿ ಪ್ಯಾಕಿಂಗ್, ಐ.ಟಿ, ಆರೋಗ್ಯ ವಲಯದಲ್ಲಿ ಉದ್ಯೋಗಾವಕಾಶಗಳಿದ್ದವು. ಆಯ್ಕೆಯಾದವರಿಗೆ ನೇಮಕಾತಿ ಪತ್ರ ನೀಡಲಾಯಿತು.
ಮೇಳ ಉದ್ಘಾಟಿಸಿದ ಮಹದೇವಪುರ ಟಾಸ್ಕ್ ಫೋರ್ಸ್ ಅಧ್ಯಕ್ಷ ಅರವಿಂದ ಲಿಂಬಾವಳಿ, ‘ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ. ಹಲವು ಮಂದಿಗೆ ಉದ್ಯೋಗ ಲಭಿಸಿದೆ’ ಎಂದರು.
ಸಾಮಾಜಿಕ ಸಬಲೀಕರಣ ಕಾರ್ಯಪಡೆ ಅಧ್ಯಕ್ಷ ಪಾಪಣ್ಣ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಮನೋಹರರೆಡ್ಡಿ, ಗ್ರಾಮಾಂತರ ಅಧ್ಯಕ್ಷ ನಟರಾಜ್, ಪ್ರಧಾನ ಕಾರ್ಯದರ್ಶಿ ಎಲ್.ರಾಜೇಶ್, ಹೂಡಿ ಪಿಳ್ಳಪ್ಪ, ಚನ್ನಸಂದ್ರ ಚಂದ್ರಶೇಖರ್, ಉದ್ಯೋಗ ಮೇಳದ ಮುಖ್ಯ ಸಂಯೋಜಕಾರ ಕಿರಣ್, ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.