ಸಾಂದರ್ಭಿಕ ಚಿತ್ರ
ಬೆಂಗಳೂರು: ನಗರದ ಆಚಾರ್ಯ ಪಾಠಶಾಲಾ ಎಜುಕೇಷನಲ್ ಟ್ರಸ್ಟ್ ವತಿಯಿಂದ ಮೇ 3ರಂದು ಶೈಕ್ಷಣಿಕ ಮತ್ತು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ನೂರಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ ಎಂದು ಟ್ರಸ್ಟ್ ಅಧ್ಯಕ್ಷ ವಿಷ್ಣುಭರತ್ ಆಲಂಪಲ್ಲಿ ತಿಳಿಸಿದರು.
ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವೀಧರರು ಮೇಳದಲ್ಲಿ ಭಾಗವಹಿಸಬಹುದು. ಕಿರ್ಲೋಸ್ಕರ್, ಇನ್ಫೊಸಿಸ್, ಟಾಟಾ ಸೇರಿ ಹಲವು ಕಂಪನಿಗಳು ಭಾಗವಹಿಸುತ್ತಿವೆ. 25 ಸಾವಿರ ಉದ್ಯೋಗ ಅವಕಾಶ ಇದ್ದು, ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಂಗವಿಕಲ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು 15 ಕಂಪನಿಗಳು ಪಾಲ್ಗೊಳ್ಳುತ್ತಿವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಎಪಿಎಸ್ ಕ್ಯಾಂಪಸ್‌ನಲ್ಲಿ ನಡೆಯುವ ಮೇಳಕ್ಕೆ ಉಚಿತ ಪ್ರವೇಶವಿದೆ. ಅಭ್ಯರ್ಥಿಗಳು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ದಾಖಲೆಗಳನ್ನು ತರಬೇಕು. ಅನುತ್ತೀರ್ಣರಾದವರು ಸಹ ಪಾಲ್ಗೊಳ್ಳಬಹುದು. ಮಾಹಿತಿಗೆ 8660599140, 8123696310 ಸಂಪರ್ಕಿಸಬಹುದು.
ಉದ್ಯೋಗ ಮೇಳದ ಜತೆ ಶೈಕ್ಷಣಿಕ ಮೇಳ ಸಹ ಆಯೋಜಿಸಲಾಗಿತ್ತಿದ್ದು, ಈವರೆಗೆ 25 ಶಿಕ್ಷಣ ಸಂಸ್ಥೆಗಳು ನೋಂದಣಿ ಮಾಡಿಕೊಂಡಿವೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಶಿಕ್ಷಣ ತಜ್ಞರು ಮಾಹಿತಿ ನೀಡುತ್ತಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.