
ಪ್ರಜಾವಾಣಿ ವಾರ್ತೆ
ಬೆಂಗಳೂರು: ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ವಾಟ್ಸ್‌ಆ್ಯಪ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಪತ್ರಕರ್ತರೊಬ್ಬರನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಬಾಗಲೂರು ಠಾಣೆ ಸಬ್ ಇನ್‌ಸ್ಪೆಕ್ಟರ್ ರಮೇಶ್ ಅವರ ದೂರು ಆಧರಿಸಿ ಪತ್ರಕರ್ತ ಶರತ್ ಶರ್ಮಾ ಕಲಗಾರ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದಾರೆ.
ಆರೋಪಿಯು ಬಾಗಲೂರು ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ಶಬರೀಶ್ ಮತ್ತು ಸಬ್ ಇನ್‌ಸ್ಪೆಕ್ಟರ್ ರಮೇಶ್, ಕೊತ್ತನೂರು ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ಚೇತನ್ ಕುಮಾರ್ ಮತ್ತು ಅವಲಹಳ್ಳಿಯ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ರಾಮಕೃಷ್ಣ ಅವರಿಗೆ ಕರೆ ಮಾಡಿ ತಲಾ ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಎಂದು ಆರೋಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.