ಎಸ್.ಕೆ. ಶ್ಯಾಮಸುಂದರ್
ಬೆಂಗಳೂರು: ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ (71) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಸೋಮವಾರ ನಿಧನರಾಗಿದ್ದಾರೆ.
ಮೃತರು ಅವಿವಾಹಿತರಾಗಿದ್ದರು.
ಚಿತ್ರದುರ್ಗ ಜಿಲ್ಲೆ ಜಾನಕೊಂಡದ ಶ್ಯಾಮಸುಂದರ್ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಮುದ್ರಣ, ಡಿಜಿಟಲ್ ಹಾಗೂ ದೃಶ್ಯ ಮಾಧ್ಯಮದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.
ಕನ್ನಡಪ್ರಭದಲ್ಲಿ ಪುರವಣಿ ಮುಖ್ಯಸ್ಥರಾಗಿ, ಒನ್‌ಇಂಡಿಯಾ ಡಾಟ್ ಕಾಮ್ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಸುವರ್ಣ ಡಿಜಿಟಲ್ ವೆಬ್‌ಸೈಟ್‌ನ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.