ಬೆಂಗಳೂರು: ‘ಸಹಕಾರ ಸಂಘಗಳು ಆರ್ಥಿಕವಾಗಿ ಸದೃಢವಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರ ಸಹಕಾರ ಸಂಘಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲು ಸಿದ್ಧ’ ಎಂದು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಸಂಘದ 70ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಂಘ ತನ್ನ ಮೂಲ ಉದ್ದೇಶಕ್ಕೆ ಬದ್ಧವಾಗಿ ಇಷ್ಟು ವರ್ಷ ಉಳಿದಿರುವುದು ಸಂತೋಷದ ವಿಚಾರ. ಪತ್ರಕರ್ತರ ಸ್ವಾಭಿಮಾನದ ಬದುಕಿಗೆ ನರವಾಗುತ್ತಿದೆ. ಸಂಘಕ್ಕ ಶಕ್ತಿ ತುಂಬುವ ಕೆಲಸಕ್ಕೆ ನಾವು ಕೈ ಜೋಡಿಸುತ್ತೇವೆ’ ಎಂದರು.
‘ಮುಂದಿನ ದಿನದಲ್ಲಿ ಸೈಬರ್ ಕಾನೂನಿನಲ್ಲಿ ಸಾಕಷ್ಟು ಸುಧಾರಣೆ ಆಗಲಿದ್ದು, ಆನ್‌ಲೈನ್ ಮಾಧ್ಯಮಕ್ಕೆ ಹೆಚ್ಚು ಆದ್ಯತೆ ದೊರೆಯಲಿದೆ’ ಎಂದರು. ‘ಮಾಧ್ಯಮ ಟ್ವೆಂಟಿ– 20’ ಸ್ಮರಣ ಸಂಚಿಕೆಯನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿ ಬಿಡುಗಡೆ ಮಾಡಿದರು. ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.