ADVERTISEMENT

ಬಾಲ ನ್ಯಾಯ ಮಂಡಳಿ: ಏಕರೂಪದ ನೀತಿಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 20:46 IST
Last Updated 17 ಫೆಬ್ರುವರಿ 2021, 20:46 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಬಾಲಾಪರಾಧಿ ನ್ಯಾಯ ಮಂಡಳಿ (ಜೆಜೆಬಿ) ಕಚೇರಿಗಳಿಗೆ ಮೂಲ ಸೌಕರ್ಯ ಒದಗಿಸಲು ಬಾಲನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆಯ ನಿಯಮಗಳ ಪ್ರಕಾರ ಏಕರೂಪದ ನೀತಿ ಸಿದ್ಧಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಸೇರಿದಂತೆ ಎಲ್ಲ ಪಾಲುದಾರ ಸಂಸ್ಥೆಗಳೊಂದಿಗೆ ಸರ್ಕಾರ ಸಮಾಲೋಚನೆ ನಡೆಸಬೇಕು. ಮೂಲಸೌಕರ್ಯ ಮತ್ತು ಸಿಬ್ಬಂದಿ ವರ್ಗೀಕರಣಕ್ಕೆ ಸಂಬಂಧಿಸಿದ ಮಾದರಿ ವಿನ್ಯಾಸ ಮತ್ತು ನೀತಿಯನ್ನು ಒಂದು ತಿಂಗಳ ಅವಧಿಯಲ್ಲಿ ಮಂಡಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿತು.

‘ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಎಲ್ಲಾ ಜೆಜೆಬಿಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಮಂಡಳಿಯ ಆವರಣವು ಮಕ್ಕಳ ಸ್ನೇಹಿಯಾಗಿರಬೇಕು’ ಎಂದು ಪೀಠ ತಿಳಿಸಿತು. ವಿಚಾರಣೆಯನ್ನು ಮಾ.2ಕ್ಕೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.