ADVERTISEMENT

1500 ಆಟೊ ಚಾಲಕರಿಗೆ ಸಮವಸ್ತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 19:11 IST
Last Updated 4 ಜನವರಿ 2021, 19:11 IST
ಸಚಿವ ಕೆ.ಗೋಪಾಲಯ್ಯ ಹಾಗೂ ರವಿಕುಮಾರ್‌ ಅವರು ಆಟೊ ಚಾಲಕರಿಗೆ ಸಮವಸ್ತ್ರ ವಿತರಿಸಿದರು. ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಎನ್.ಜಯರಾಮ್, ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಎ.ಎಚ್.ಆನಂದ್, ಎಸ್.ಹರೀಶ್ ಹಾಗೂ ಇತರರು ಇದ್ದರು.
ಸಚಿವ ಕೆ.ಗೋಪಾಲಯ್ಯ ಹಾಗೂ ರವಿಕುಮಾರ್‌ ಅವರು ಆಟೊ ಚಾಲಕರಿಗೆ ಸಮವಸ್ತ್ರ ವಿತರಿಸಿದರು. ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಎನ್.ಜಯರಾಮ್, ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಎ.ಎಚ್.ಆನಂದ್, ಎಸ್.ಹರೀಶ್ ಹಾಗೂ ಇತರರು ಇದ್ದರು.   

ಬೆಂಗಳೂರು: ‘ಮಹಾಲಕ್ಷ್ಮೀ ಬಡಾವಣೆ ವಿಧಾನಸಭಾ ಕ್ಷೇತ್ರದ ಆಟೊ ಚಾಲಕರ ಸಂಘಕ್ಕೆ ಪ್ರತಿ ವರ್ಷ ₹1 ಲಕ್ಷ ಸಹಾಯಧನ ನೀಡಲಾಗುವುದು’ ಎಂದು ಆಹಾರ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.

ಮಹಾಲಕ್ಷ್ಮೀ ಎಜುಕೇಷನ್ ಟ್ರಸ್ಟ್ ಹಾಗೂ ಮಹಾಲಕ್ಷ್ಮೀ ಬಡಾವಣೆ ಬಿಜೆಪಿ ಮಂಡಲದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನ–ಸುಶಾಸನ ಆಡಳಿತ ದಿನ’ದ ಅಂಗವಾಗಿ ಕ್ಷೇತ್ರದ 1,500 ಆಟೊ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಲ್ಲ ಚಾಲಕರು ಪ್ರತಿ ವಾರ ₹100 ಸೇರಿಸಿದರೆ, ತಿಂಗಳಿಗೆ ಹಾಗೂ ವರ್ಷಕ್ಕೆ ಅದು ದೊಡ್ಡ ಮೊತ್ತವಾಗಿ ಪರಿವರ್ತನೆಯಾಗುತ್ತದೆ. ಇದು ನಿಮ್ಮ ಸಂಕಷ್ಟಗಳಿಗೆ ನೆರವಾಗಲಿದೆ. ಬೇರೊಬ್ಬರ ಬಳಿ ಕೈಚಾಚದೆ, ಸ್ವತಂತ್ರ ಜೀವನ ನಡೆಸಲೂ ಸಾಧ್ಯವಾಗುತ್ತದೆ’ ಎಂದು ಕಿವಿಮಾತು ಹೇಳಿದರು.

ADVERTISEMENT

‘ಕ್ಷೇತ್ರದಲ್ಲಿನ ಆಟೊ ಚಾಲಕರಿಗೆ ಕೊಟ್ಟ ಮಾತಿನಂತೆ ಎರಡು ಜೊತೆ ಸಮವಸ್ತ್ರ ವಿತರಿಸಲಾಗಿದೆ.ಆಟೊದಲ್ಲಿ ಬರುವ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಾ ಇಡೀ ರಾಜ್ಯದಲ್ಲಿ ಮಹಾಲಕ್ಷ್ಮೀ ಬಡಾವಣೆ ಕ್ಷೇತ್ರದ ಚಾಲಕರು ಬೇರೆಯವರಿಗೆ ಆದರ್ಶ ಹಾಗೂ ಮಾದರಿಯಾಗಿ ಕಾಣಬೇಕು’ ಎಂದರು.

ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರವಿಕುಮಾರ್,‘ಆಟೊ ಚಾಲಕರು ಕುಡಿತಕ್ಕೆ ಒಳಗಾಗಬೇಡಿ. ಇದರಿಂದ ನಿಮ್ಮ ಕುಟುಂಬಗಳು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.