ADVERTISEMENT

ಲೇಖಕಿ ಪ್ರೀತಿ ಶುಭಚಂದ್ರಗೆ ‘ಚಾವುಂಡರಾಯ ದತ್ತಿ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 11 ಮೇ 2024, 15:58 IST
Last Updated 11 ಮೇ 2024, 15:58 IST
ಪ್ರೀತಿ ಶುಭಚಂದ್ರ
ಪ್ರೀತಿ ಶುಭಚಂದ್ರ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಲೇಖಕಿ ಪ್ರೀತಿ ಶುಭಚಂದ್ರ ಆಯ್ಕೆಯಾಗಿದ್ದಾರೆ.

ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದಲ್ಲಿ ಈ ಆಯ್ಕೆ ನಡೆದಿದೆ. ಪ್ರಶಸ್ತಿ ₹ 30 ಸಾವಿರ ನಗದು ಒಳಗೊಂಡಿದೆ. 

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಪರಿಷತ್ತಿನಲ್ಲಿ ಈ ದತ್ತಿ ಸ್ಥಾಪಿಸಿದ್ದು, ಪ್ರಾಚೀನ ಜೈನ ಸಾಹಿತ್ಯ ಆಧರಿಸಿ ಆಧುನಿಕ ಕನ್ನಡ ಭಾಷೆಯಲ್ಲಿ ರಚಿಸಿದ ಪ್ರಬಂಧ, ಸಂಶೋಧನೆ, ವಿಮರ್ಶೆ, ಕಾದಂಬರಿ, ನಾಟಕ, ಕಥಾ ಸಾಹಿತ್ಯ ಪ್ರಕಾರಗಳ ಲೇಖಕರಿಗೆ ಅಥವಾ ಗ್ರಂಥ ಸಂಪಾದಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ADVERTISEMENT

ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸಿದ ಪ್ರೀತಿ ಶುಭಚಂದ್ರ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಮೊದಲ ಮಹಿಳಾ ನಿರ್ದೇಶಕಿಯಾಗಿದ್ದರು. ‘ಇಪ್ಪತ್ತನೆಯ ಶತಮಾನದ ವಚನ ಸಾಹಿತ್ಯ: ಒಂದು ಅಧ್ಯಯನ’ ಅವರ ಪಿಎಚ್.ಡಿ ಮಹಾಪ್ರಬಂಧದ ವಿಷಯವಾಗಿದೆ ಎಂದು ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.