ADVERTISEMENT

ಪರಿಹಾರ ಮೊತ್ತ ಹೆಚ್ಚಿಸಿ: ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 17:26 IST
Last Updated 11 ಆಗಸ್ಟ್ 2020, 17:26 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಕಾಚರಕನಹಳ್ಳಿಕೊಳೆಗೇರಿ ಪ್ರದೇಶದಲ್ಲಿದ್ದ ವಲಸೆ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, ‘ಕಾನೂನು ಕೈಗೆ ತೆಗೆದುಕೊಂಡು ಗುಡಿಸಲುಗಳಿಗೆ ಬೆಂಕಿ ಹಚ್ಚಿರುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ನೆಲೆ ಕಳೆದುಕೊಂಡವರಿಗೆ ಸರ್ಕಾರ ನೀಡಿದ ಪರಿಹಾರ ತೀರಾ ಕಡಿಮೆ’ ಎಂದು ಅಭಿಪ್ರಾಯಪಟ್ಟಿತು.

‘ಪ್ರತಿ ಕುಟುಂಬಕ್ಕೆ ₹6,100 ಪರಿಹಾರ ನಿಗದಿ ಮಾಡಲಾಗಿದೆ. ಬಡ ಜನರ ಮನೆಗಳನ್ನು ನಾಶ ಮಾಡಿದ್ದಕ್ಕೆ ಇದು ಸೂಕ್ತ ಪರಿಹಾರವಲ್ಲ. ಪರಿಹಾರ ಮೊತ್ತ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಇನ್ನೆರಡು ವಾರದಲ್ಲಿ ಮರುಪರಿಶೀಲನೆ ನಡೆಸಬೇಕು’ ಎಂದು ಪೀಠ ನಿರ್ದೇಶನ ನೀಡಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.