ADVERTISEMENT

ಕಾಡುಗೋಡಿ: ವಿದ್ಯುತ್‌ ಸ್ಪರ್ಶಿಸಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 4:12 IST
Last Updated 9 ಜೂನ್ 2024, 4:12 IST
   

ಬೆಂಗಳೂರು: ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಂಬೇನ ಅಗ್ರಹಾರದಲ್ಲಿ ವಿದ್ಯುತ್‌ ಸ್ಪರ್ಶದಿಂದ ಕಾರ್ಮಿಕ ಬಿಪುಲ್‌ ಕುಮಾರ್ (35) ಎಂಬುವವರು ಮೃತಪಟ್ಟಿದ್ದಾರೆ.

ನಿರ್ಮಾಣ ಹಂತದ ಮನೆಯೊಂದ ರಲ್ಲಿ ಬಿಪುಲ್ ಕುಮಾರ್‌ ಅವರು ಟೈಲ್ಸ್‌ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಟೇಬಲ್ ಫ್ಯಾನ್‌ ಆನ್‌ ಮಾಡುವ ಸಂದರ್ಭದಲ್ಲಿ ವಿದ್ಯುತ್‌ ಆಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ತಕ್ಷಣವೇ ಸ್ಥಳದಲ್ಲಿದ್ದ ಇತರೆ ಕಾರ್ಮಿಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಬಿಪುಲ್‌ ಕುಮಾರ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ದುರಂತಕ್ಕೆ ಗುತ್ತಿಗೆದಾರನ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದ್ದು, ಗುತ್ತಿಗೆದಾರ ಚೆನ್ನರಾಮ್‌ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.