ADVERTISEMENT

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ ಅನಾವರಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ನವೆಂಬರ್ 2025, 11:14 IST
Last Updated 11 ನವೆಂಬರ್ 2025, 11:14 IST
<div class="paragraphs"><p>"ಕಲಾಲೋಕ ಮಳಿಗೆ"ಯನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು.</p></div>

"ಕಲಾಲೋಕ ಮಳಿಗೆ"ಯನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು.

   

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೆರೆಯಲಾಗಿರುವ ಕರ್ನಾಟಕದ ಸಾಂಪ್ರದಾಯಿಕ ಉತ್ಪನ್ನಗಳ ಮಾರಾಟ ಕೇಂದ್ರವಾದ "ಕಲಾಲೋಕ ಮಳಿಗೆ"ಯನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಮಳಿಗೆ ಸ್ಥಾಪನೆ ಮಾಡಲಾಗಿದೆ. ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಎಂದು ಹೇಳಿದರು.

ADVERTISEMENT

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತಿದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ ಎಂದರು.

ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟದ ಗುರಿಯನ್ನು ಹೊಂದಲಾಗಿದೆ. ಎಂದು ತಿಳಿಸಿದರು.

ಉದ್ಘಾಟನೆ ವೇಳೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ ಅವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.