ADVERTISEMENT

ಕಲಾಸಿಪಾಳ್ಯ ಠಾಣೆ: ಬೈಕ್‌, ಮೊಬೈಲ್‌ ಕಳ್ಳನ ಬಂಧನ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 19:45 IST
Last Updated 1 ಡಿಸೆಂಬರ್ 2021, 19:45 IST
ಆರೋಪಿಯಿಂದ ಜಪ್ತಿ ಮಾಡಿರುವ ಬೈಕ್‌ ಹಾಗೂ ಮೊಬೈಲ್‌ಗಳು 
ಆರೋಪಿಯಿಂದ ಜಪ್ತಿ ಮಾಡಿರುವ ಬೈಕ್‌ ಹಾಗೂ ಮೊಬೈಲ್‌ಗಳು    

ಬೆಂಗಳೂರು: ನಗರದ ವಿವಿಧೆಡೆ ಕಳ್ಳತನ ಮಾಡುತ್ತಿದ್ದ ಬಾಲಕನನ್ನು ಬಂಧಿಸಿರುವ ಕಲಾಸಿಪಾಳ್ಯ ಠಾಣೆ ಪೊಲೀಸರು ಆತನಿಂದ ₹4.30 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನ ಹಾಗೂ ವಿವಿಧ ಕಂಪನಿಗಳ 10 ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ.

‘ಠಾಣಾ ವ್ಯಾಪ್ತಿಯಲ್ಲಿಅಪರಿಚಿತ ಬಾಲಕನೊಬ್ಬ ದ್ವಿಚಕ್ರವಾಹನವೊಂದನ್ನು ಮಾರಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಸ್ಥಳಕ್ಕೆ ಹೋಗಿ ಆತನನ್ನು ವಶಕ್ಕೆ ಪಡೆಯಲಾಗಿತ್ತು. ಅದು ಕದ್ದು ತಂದಿರುವ ಬೈಕ್‌ ಎಂಬುದನ್ನು ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದ’ ಎಂದು ಪೊಲೀಸರು ಹೇಳಿದ್ದಾರೆ.

‘ಪರಪ್ಪನ ಅಗ್ರಹಾರ ಹಾಗೂ ಕುದೂರು ಪೊಲೀಸ್‌ ಠಾಣೆಗಳ ವ್ಯಾಪ್ತಿಗಳಲ್ಲಿ ಮೊಬೈಲ್‌ ಹಾಗೂ ಬೈಕ್‌ಗಳನ್ನು ಕಳ್ಳತನ ಮಾಡಿದ್ದಾಗಿಯೂ ಆರೋ‍ಪಿ ವಿಚಾರಣೆ ವೇಳೆ ತಿಳಿಸಿದ್ದಾನೆ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.