ADVERTISEMENT

ಬೆಂಗಳೂರಿನಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 22:21 IST
Last Updated 3 ಸೆಪ್ಟೆಂಬರ್ 2021, 22:21 IST
ವಶಪಡಿಸಿಕೊಂಡಿರುವ ಸ್ಕೂಟರ್‌ ಹಾಗೂ ಗಾಂಜಾ
ವಶಪಡಿಸಿಕೊಂಡಿರುವ ಸ್ಕೂಟರ್‌ ಹಾಗೂ ಗಾಂಜಾ   

ಬೆಂಗಳೂರು: ಕಲಾಸಿ ಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ6 ಕೆಜಿ 263 ಗ್ರಾಂ ಗಾಂಜಾ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.

ಲಿಯಾಕತ್‌ ಅಲಿ ಬಂಧಿತ ಆರೋಪಿ. ಈತ ನಗರದ ಮಾವಳ್ಳಿ ನಿವಾಸಿ ಎಂಬುದು ತನಿಖೆಯಿಂದ ಗೊತ್ತಾಗಿದೆ. ಈತನ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ.

‘ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗಾಂಜಾ ಮಾರುತ್ತಿರುವ ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಸಿಬ್ಬಂದಿ ಜನತಾ ಲಾಡ್ಜ್‌ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತ ಆಂಧ್ರಪ್ರದೇಶದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ’ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

‘ಈತನ ಕಾರ್ಯಕ್ಕೆ ಮತ್ತೊಬ್ಬ ವ್ಯಕ್ತಿ ಸಹಕರಿಸುತ್ತಿದ್ದ ಎಂಬುದೂ ವಿಚಾರಣೆಯಿಂದ ಗೊತ್ತಾಗಿದೆ. ಆತನ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಕಳೆದ ಒಂದು ವರ್ಷದಿಂದ ಈ ಕಾರ್ಯದಲ್ಲಿ ತೊಡಗಿಕೊಂಡಿರುವುದಾಗಿ ಆತ ಹೇಳಿದ್ದಾನೆ. ಆರೋಪಿಯಿಂದ ಇನ್ನಷ್ಟು ಮಾಹಿತಿಗಳನ್ನು ಕಲೆಹಾಕಿ ಅದರ ಆಧಾರದಲ್ಲಿ ತನಿಖೆ ಮುಂದುವರಿಸಲಾಗುತ್ತದೆ’ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.