
ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಕಲ್ಪತರು ಸಾಹಿತ್ಯ, ಕಲಾ ಟ್ರಸ್ಟ್‌ನವರು ಆರ್.ಜಿ.ಬಸಪ್ಪ ಅವರ ಸ್ಮರಣಾರ್ಥ ನೀಡುವ ಪ್ರಶಸ್ತಿಗಳಿಗೆ ಮೂವರನ್ನು ಆಯ್ಕೆ ಮಾಡಲಾಗಿದೆ.
ಕಲ್ಪತರು ಸಾಹಿತ್ಯ ಸಿರಿ ದತ್ತಿ ಪ್ರಶಸ್ತಿಗೆ ಬಾಗಲಕೋಟೆ ಜಿಲ್ಲೆಯ ಆಶುಕವಿ ಸಿದ್ದಪ್ಪ ಬಿದರಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹10 ಸಾವಿರ ನಗದು, ಫಲಕ ಒಳಗೊಂಡಿದೆ.
ಕಲ್ಪತರು ಸಂಗೀತ ಸಿರಿ ರಾಜ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆಯ ಸಂಗೀತ ನಿರ್ದೇಶಕ ರಾಜು ಎಮ್ಮಿಗೂರ ಹಾಗೂ ಕಲ್ಪತರು ಕಲಾಸಿರಿ ಪ್ರಶಸ್ತಿಗೆ ತುಮಕೂರು ಜಿಲ್ಲೆಯ ವೀರಗಾಸೆ ಕಲಾವಿದೆ ಮಾಧುರ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಎರಡೂ ಪ್ರಶಸ್ತಿಗಳು ತಲಾ ₹5 ಸಾವಿರ ನಗದು ಹಾಗೂ ಫಲಕ ಒಳಗೊಂಡಿವೆ.
ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಜ.17ರಂದು ಸಂಜೆ 5ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಾಹಿತಿ ಸತ್ಯಾನಂದ ಪಾತ್ರೋಟ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಸಾಪ ಮಾಜಿ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಎಂ.ವಿ ಷಡಕ್ಷರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.