ADVERTISEMENT

ಬೆಂಗಳೂರು | ಕಮಲ್ ಹಾಸನ್‌ ಭಾವಚಿತ್ರಕ್ಕೆ ಬೆಂಕಿ: ಎಫ್‌ಐಆರ್‌ ದಾಖಲು

​ಪ್ರಜಾವಾಣಿ ವಾರ್ತೆ
Published 30 ಮೇ 2025, 16:05 IST
Last Updated 30 ಮೇ 2025, 16:05 IST
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)
ಎಫ್‌ಐಆರ್‌ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ನಟ ಕಮಲ್‌ ಹಾಸನ್‌ ಅವರ ಭಾವಚಿತ್ರಕ್ಕೆ ಬೆಂಕಿಹಾಕಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ನಮ್ಮ ಕರುನಾಡ ಯುವಸೇನೆ’ ಕಾರ್ಯಕರ್ತ ವಿ.ರವಿಕುಮಾರ್‌ ವಿರುದ್ಧ ಬಸವೇಶ್ವರನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಪೊಲೀಸ್‌ ಸಿಬ್ಬಂದಿಯೊಬ್ಬರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

‘ಬಸವೇಶ್ವರನಗರದ ಕೆಎಚ್‌ಬಿ ರಸ್ತೆಯ ಹಾವನೂರು ವೃತ್ತದ ಪವಿತ್ರಾ ಪ್ಯಾರಡೈಸ್‌ ಬಳಿ ಕಮಲ್‌ ಹಾಸನ್‌ ಅವರ ಭಾವಚಿತ್ರಕ್ಕೆ ಆರೋಪಿ ಬೆಂಕಿ ಹಾಕಿ ಸುಟ್ಟು ಹಾಕಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಣೆಗುರುವನಹಳ್ಳಿಯ ರವಿಕುಮಾರ್‌ನನ್ನು ವಶಕ್ಕೆ ಪಡೆದುಕೊಳ್ಳಲಾಯಿತು’ ಎಂದು ಪೊಲೀಸರು ಹೇಳಿದರು.

ADVERTISEMENT

‘ಕನ್ನಡ ತಮಿಳಿನಿಂದ ಹುಟ್ಟಿರುವುದು’ ಎಂಬುದಾಗಿ ಕಮಲ್‌ ಹಾಸನ್‌ ಹೇಳಿಕೆ ನೀಡಿದ್ದರು. ಹೇಳಿಕೆ ವಾಪಸ್‌ ಪಡೆದು ಕ್ಷಮೆ ಕೋರಬೇಕು ಎಂದು ವಿವಿಧ ಸಂಘಟನೆಗಳು ಆಗ್ರಹಿಸಿದ್ದವು. ಆದರೂ ಕಮಲ್‌ ಹಾಸನ್‌ ಕ್ಷಮೆ ಕೇಳಿಲ್ಲ. ಹೀಗಾಗಿ ಸಿಟ್ಟಿಗೆದ್ದು ನಟನ ಭಾವಚಿತ್ರಕ್ಕೆ ಬೆಂಕಿ ಹಾಕಿದ್ದಾಗಿ ಆರೋಪಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.