ADVERTISEMENT

CCL ವೇಳೆ ಶೌಚಾಲಯದಲ್ಲಿ ಕನ್ನಡ ಕಿರುತೆರೆ ನಟಿಯ ವಿಡಿಯೊ ಮಾಡಿ ಬ್ಲ್ಯಾಕ್‌ಮೇಲ್!

ಅಪರಿಚಿತ ವ್ಯಕ್ತಿಯಿಂದ ಹಣಕ್ಕಾಗಿ ಬ್ಲ್ಯಾಕ್ ಮೇಲ್

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 15:54 IST
Last Updated 17 ಫೆಬ್ರುವರಿ 2026, 15:54 IST
<div class="paragraphs"><p>ಇನ್‌ಸ್ಟಾಗ್ರಾಂ</p></div>

ಇನ್‌ಸ್ಟಾಗ್ರಾಂ

   

ಬೆಂಗಳೂರು: ಕಿರುತೆರೆ ನಟಿ ಹಾಗೂ ರಿಯಾಲಿಟಿ ಶೋ ಸ್ಪರ್ಧಿಯ ಖಾಸಗಿ ವಿಡಿಯೊ ಚಿತ್ರೀಕರಣ ಮಾಡಿದ ಅಪರಿಚಿತ ವ್ಯಕ್ತಿ, ಕರೆ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿರುವ ಘಟನೆ ನಡೆದಿದೆ.

ಈ ಸಂಬಂಧ, 32 ವರ್ಷದ ನಟಿ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಶೋಧ ಕಾರ್ಯಕೈಗೊಂಡಿದ್ದಾರೆ.

ADVERTISEMENT

ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌ ಟೂರ್ನಿ ಆಯೋಜಿಸಲಾಗಿತ್ತು. ಅದರ ಅಂಗವಾಗಿ ಫೆಬ್ರುವರಿ 6, 7 ಮತ್ತು 8 ರಂದು ನಡೆದ ಕಾರ್ಯಕ್ರಮದಲ್ಲಿ ದೂರುದಾರೆ ಭಾಗಿಯಾಗಿದ್ದರು. ಈ ವೇಳೆ, ಕ್ರೀಡಾಂಗಣದಲ್ಲಿರುವ ಶೌಚಾಲಯಕ್ಕೆ ನಟಿ ಹೋಗಿದ್ದಾಗ, ಅಪರಿಚಿತ ವ್ಯಕ್ತಿ ವಿಡಿಯೊ ಚಿತ್ರೀಕರಣ ಮಾಡಿದ್ದಾನೆ.

‘ಕೆಲ ದಿನಗಳ ಬಳಿಕ ಸ್ವಾನ್‌ 3704722 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ತನ್ನ ಸ್ನೇಹಿತೆ ಖಾತೆಗೆ ಕೆಲ ವಿಡಿಯೊಗಳನ್ನು ಕಳುಹಿಸಿ, ಇವುಗಳನ್ನು ಬಹಿರಂಗ ಪಡಿಸದಿರಲು ಹಣ ಕೊಡುವಂತೆ ನಾಲ್ಕೈದು ಬಾರಿ ವಿಡಿಯೊ ಕರೆ ಮಾಡಿ, ಆಕೆಗೂ ಮತ್ತು ತನಗೂ ಬೇಡಿಕೆ ಇಟ್ಟಿದ್ದಾನೆ’ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ.

‘ಒಂದು ವೇಳೆ ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊಗಳನ್ನು ಹರಿಯಬಿಡಲಾಗುವುದು ಎಂದು ಬೆದರಿಕೆ ಹಾಕಿದ್ದಾನೆ. ಖಾಸಗಿ ವಿಡಿಯೊ ಸೆರೆ ಹಿಡಿದು ನನ್ನ ಗೌರವಕ್ಕೆ ಧಕ್ಕೆ ತಂದು, ಬ್ಲ್ಯಾಕ್‌ ಮೇಲ್ ಮಾಡುತ್ತಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು‘ ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.