ಬೆಂಗಳೂರು: ಕನ್ನಡ ಸಂಘರ್ಷ ಸಮಿತಿ ನೀಡುವ ‘ಕನ್ನಡ ಕಟ್ಟಾಳು’ ಪ್ರಶಸ್ತಿಗೆ ಕನ್ನಡ ಕಾರ್ಯಕರ್ತ ಬಿ.ಎಂ. ನಾರಾಯಣಸ್ವಾಮಿ ಹಾಗೂ ‘ನಿಸ್ಸೀಮ ಕನ್ನಡತಿ’ ಪ್ರಶಸ್ತಿಗೆ ಲೇಖಕಿಯೂ ಆಗಿರುವ ಕಲಾವಿದೆ ಜಯಲಕ್ಷ್ಮಿ ಪಾಟೀಲ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ಸ್ಮರಣಿಕೆ ಹಾಗೂ ತಲಾ ₹ 11 ಸಾವಿರ ನಗದು ಒಳಗೊಂಡಿದೆ. ಇದೇ 31ರಂದು ಸಂಜೆ 4.30ಕ್ಕೆ ಎನ್.ಆರ್.ಕಾಲೊನಿಯಲ್ಲಿರುವ ಬಿ.ಎಂ.ಶ್ರೀ. ಕಲಾಭವನದಲ್ಲಿ ಸಮಿತಿಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ರಾಮಣ್ಣ ಎಚ್. ಕೋಡಿಹೊಸಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷ ಎ.ಎಸ್. ನಾಗರಾಜಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.