ADVERTISEMENT

ಸ್ವಾಯತ್ತ ಕೇಂದ್ರ ಸ್ಥಾಪನೆಗೆ ಉನ್ನತ ಶಿಕ್ಷಣ ಇಲಾಖೆ ಅಡ್ಡಿ

ಕನ್ನಡ ಗೆಳೆಯರ ಬಳಗ ಆರೋಪ

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 17:03 IST
Last Updated 3 ಜುಲೈ 2020, 17:03 IST

ಬೆಂಗಳೂರು: ’ಮೈಸೂರಿನಲ್ಲಿ ಶಾಸ್ತ್ರೀಯ ಕನ್ನಡ ಉನ್ನತ ಅಧ್ಯಯನ ಕೇಂದ್ರ ಸ್ಥಾಪನೆಗೆ ನೋಂದಣಿಯಾಗಿರುವ ಜಮೀನನ್ನು ಹಿಂಪಡೆಯುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯಪ್ರವೇಶಿಸಿ, ಕೂಡಲೇ ಆದೇಶ ಹಿಂಪಡೆಯಬೇಕು‘ ಎಂದು ಕನ್ನಡ ಗೆಳೆಯರ ಬಳಗ ಒತ್ತಾಯಿಸಿದೆ.

'ಕಳೆದ ವರ್ಷ ಪ್ರಾಧಿಕಾರದ ಸಭೆ ನಡೆಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ, ಸ್ವಾಯತ್ತ ಕೇಂದ್ರ ನಿರ್ಮಾಣಕ್ಕಿರುವ ಅಡೆತಡೆಗಳನ್ನು ನಿವಾರಿಸುವುದಾಗಿ ಭರವಸೆ ನೀಡಿದ್ದರು. ಇದರ ಫಲವಾಗಿ ಶಾಸ್ತ್ರೀಯ ಕನ್ನಡ ಉನ್ನತ ಅಧ್ಯಯನ ಕೇಂದ್ರ ಸ್ಥಾಪನೆಗೆ ಮೈಸೂರು ವಿಶ್ವವಿದ್ಯಾಲಯ ಮೂರು ಎಕರೆ ಹಸ್ತಾಂತರಿಸಿತು' ಎಂದು ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ ತಿಳಿಸಿದ್ದಾರೆ.

'ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ಬರುವಷ್ಟರಲ್ಲಿ ಜಾಗವನ್ನು ಹಿಂಪಡೆಯಲು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜೂ.12ರಂದು ಆದೇಶಿಸಿದ್ದಾರೆ. ಕೇಂದ್ರ ಸ್ಥಾಪನೆಗೆ ಒಂದು ವಾರದಲ್ಲಿ ಪರ್ಯಾಯ ಸ್ಥಳ ಹುಡುಕುವಂತೆ ಆದೇಶದಲ್ಲಿ ಸೂಚಿಸಿದ್ದಾರೆ. ಇದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ' ಎಂದು ದೂರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.