ADVERTISEMENT

ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 16:53 IST
Last Updated 4 ಡಿಸೆಂಬರ್ 2025, 16:53 IST
   

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2025-26ನೇ ಸಾಲಿನಲ್ಲಿ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ.

ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ₹15,000 ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18ರಿಂದ 40 ವರ್ಷದವರಾಗಿರಬೇಕು. ಸ್ವ ವಿವರ ,ಮತ್ತು ದಾಖಲೆಗಳನ್ನು ಸಲ್ಲಿಸಬೇಕು. ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ, ಸ್ನಾತಕೋತ್ತರ ಪದವಿಗೆ (ಪಿಎಚ್‌.ಡಿ) ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳಾಗಿರಬಾರದು. ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. 

ಅರ್ಜಿಗಳೊಂದಿಗೆ ಹಸ್ತಪ್ರತಿಯನ್ನು ಡಿ.24ರ ಒಳಗೆ ಆಡಳಿತಾಧಿಕಾರಿ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು–  560 002 ಅವರಿಗೆ ಕಳುಹಿಸಿಕೊಡಲು ಕೋರಿದೆ.

ADVERTISEMENT

ಅರ್ಜಿ ನಮೂನೆಗೆ ಮತ್ತು ಮಾಹಿತಿಗಾಗಿ ಕಚೇರಿ ಸಂಪರ್ಕಿಸಬಹದು.

ವೆಬ್‍ಸೈಟ್ www.kannadapustakapradhikara.com,

ದೂರವಾಣಿ: 080-22484516, 22107704 ಕೂಡ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.