ADVERTISEMENT

ಬೆಂಗಳೂರು: ರಾಷ್ಟ್ರೋತ್ಥಾನ ಪುಸ್ತಕ ಹಬ್ಬ ಸಮಾರೋಪ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 15:27 IST
Last Updated 4 ಡಿಸೆಂಬರ್ 2025, 15:27 IST
<div class="paragraphs"><p>ಪುಸ್ತಕ</p></div>

ಪುಸ್ತಕ

   

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 37 ದಿನಗಳ ಕನ್ನಡ ಪುಸ್ತಕ ಹಬ್ಬದ ಸಮಾರೋಪ ಹಾಗೂ ಸಿದ್ದೇಶ್ವರ ಸ್ವಾಮೀಜಿ ಅವರ ಸ್ಮರಣೆ ಕಾರ್ಯಕ್ರಮ ಡಿ.7ರಂದು ನಡೆಯಲಿದೆ.

ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್‌ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಘೋಡಗೇರಿ ಶಿವಾನಂದ ಮಠದ ಮಲ್ಲಯ್ಯ ಸ್ವಾಮೀಜಿ ಭಾಗವಹಿಸಲಿದ್ದಾರೆ. ಶಂಕರ್‌ ಶಾನುಭಾಗ್‌ ಅವರು ವಚನಗಳ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ADVERTISEMENT

ಸಂಜೆ 5ಕ್ಕೆ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ತಜ್ಞ ಗುರುರಾಜ ಕರಜಗಿ ಭಾಗವಹಿಸುವರು. ಕನ್ನಡ ಪುಸ್ತಕ ಹಬ್ಬದ ಪ್ರಯುಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.