ಬೆಂಗಳೂರು: ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂಘ ಸಂಸ್ಥೆಗಳಿಗೆ ನೀಡುವ ವಾರ್ಷಿಕ ಅನುದಾನದ ನೀತಿಯನ್ನು ಮರು ಪರಿಶೀಲಿಸಬೇಕು’ ಎಂದು ಒತ್ತಾಯಿಸಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಅವರಿಗೆ ಉದಯಭಾನು ಕಲಾ ಸಂಘದ ಸಂಸ್ಥಾಪಕ ಗೌರವ ಕಾರ್ಯದರ್ಶಿ ಎಂ.ನರಸಿಂಹ ಪತ್ರ ಬರೆದಿದ್ದಾರೆ.
‘ನಾಡು–ನುಡಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಕ್ಕೆ ನಿರಂತರವಾಗಿ ಶ್ರಮಿಸುತ್ತಿರುವ ಸಂಸ್ಥೆಗಳಿಗೆ ಸರ್ಕಾರ ಉದಾರ ಸಹಾಯ ನೀಡುವುದು ಅವಶ್ಯಕ. ಆದರೆ, ಎಲ್ಲ ಸಂಸ್ಥೆಗಳಿಗೆ ಕೇವಲ ₹2.5 ಲಕ್ಷ ಅನುದಾನದ ಮಿತಿ ನಿಗದಿಪಡಿಸುವುದು ನ್ಯಾಯಸಮ್ಮತವಲ್ಲ. ಸಂಸ್ಥೆಗಳನ್ನು ಸಕಾರಣವಿಲ್ಲದೆ ಕೈಬಿಟ್ಟಿರುವುದೂ ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.