
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ‘ಧನಸಹಾಯ’ ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜ.9ರವರೆಗೆ ವಿಸ್ತರಿಸಿದೆ.
ಸಾಂಸ್ಕೃತಿಕ ವಾತಾವರಣ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಅರ್ಹ ಸಾಂಸ್ಕೃತಿಕ ಸಂಘ– ಸಂಸ್ಥೆಗಳಿಗೆ ಈ ಯೋಜನೆಯಡಿ ಆರ್ಥಿಕ ನೆರವು ಒದಗಿಸಲಾಗುತ್ತದೆ. 2025–26ನೇ ಸಾಲಿಗೆ ಯೋಜನೆಯಡಿ ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಡಿ.1ರಿಂದ ಡಿ.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದವರು, ಅವಧಿ ವಿಸ್ತರಿಸಲು ಇಲಾಖೆಗೆ ಆಗ್ರಹಿಸಿದ್ದರು. ಆದ್ದರಿಂದ 10 ದಿನ ವಿಸ್ತರಿಸಲಾಗಿದೆ.
ಅರ್ಹ ಸಂಘ– ಸಂಸ್ಥೆಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ನೇರವಾಗಿ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.