ADVERTISEMENT

ಬಿ.ಆರ್. ಲಕ್ಷ್ಮಣರಾವ್‌ಗೆ ‘ಕನ್ನಡ ಕಾಯಕಶ್ರೀ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 16:01 IST
Last Updated 11 ಜೂನ್ 2025, 16:01 IST
<div class="paragraphs"><p>ಬಿ.ಆರ್. ಲಕ್ಷ್ಮಣರಾವ್</p></div>

ಬಿ.ಆರ್. ಲಕ್ಷ್ಮಣರಾವ್

   

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್‌ ಲಿಮಿಟೆಡ್‌ನ ವಿಮಾನ ವಿಭಾಗದಲ್ಲಿರುವ ವಿಮಾನ ಕನ್ನಡ ಸಂಘ ನೀಡುವ ‘ಕನ್ನಡ ಕಾಯಕಶ್ರೀ’ ಪ್ರಶಸ್ತಿಗೆ ಕವಿ ಬಿ.ಆರ್. ಲಕ್ಷ್ಮಣರಾವ್ ಆಯ್ಕೆಯಾಗಿದ್ದಾರೆ. 

ಲಕ್ಷ್ಮಣರಾವ್ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹20 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. 

ADVERTISEMENT

ಜೂನ್‌ 22ರಂದು ಎಚ್‌ಎಎಲ್‌ ಬಳಿ ಇರುವ ವಿ.ಎಂ. ಘಾಟ್ಗೆ ಸಭಾಂಗಣದಲ್ಲಿ ನಡೆಯುವ ಸಂಘದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಮಾನ ವಿಭಾಗದ ಮಹಾ ವ್ಯವಸ್ಥಾಪಕ ವಿ. ಶ್ರೀಕೃಷ್ಣ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಜಿ.ಎಸ್. ಗೋಪಾಲನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.