ADVERTISEMENT

ಕನ್ನಡ ನಾಮಫಲಕ: ಮಸೂದೆ ಮಂಡನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2024, 16:16 IST
Last Updated 13 ಫೆಬ್ರುವರಿ 2024, 16:16 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಕೈಗಾರಿಕೆಗಳು, ವಾಣಿಜ್ಯ ಚಟುವಟಿಕೆ ಕೇಂದ್ರಗಳು, ಆಸ್ಪತ್ರೆ, ಪ್ರಯೋಗಾಲಯಗಳು ಸೇರಿದಂತೆ ರಾಜ್ಯದಲ್ಲಿನ ಎಲ್ಲ ವಹಿವಾಟು ಕೇಂದ್ರಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರ ನೀಡುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ–2024 ಅನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಸಚಿವರ ಪರವಾಗಿ ಗೃಹ ಸಚಿವ ಜಿ. ಪರಮೇಶ್ವರ ಮಸೂದೆಯನ್ನು ಮಂಡಿಸಿದರು. ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು, ಪ್ರಯೋಗಾಲಯಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು ಸೇರಿದಂತೆ ಎಲ್ಲ ಬಗೆಯ ಸಂಸ್ಥೆಗಳಿಗೂ ಈ ತಿದ್ದುಪಡಿ ಅನ್ವಯವಾಗಲಿದೆ. 2022ರ ಕಾಯ್ದೆಗೆ ಈ ತಿದ್ದುಪಡಿಯನ್ನು ತರಲಾಗುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.