ADVERTISEMENT

ಕನ್ನಡ ಪುಸ್ತಕ ಪ್ರಾಧಿಕಾರ: ಸಮಗ್ರ ಸಾಹಿತ್ಯ ಸಂಪುಟ ಬಿಡುಗಡೆ ನಾಳೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 0:55 IST
Last Updated 12 ಆಗಸ್ಟ್ 2025, 0:55 IST
   

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಆಗಸ್ಟ್‌ 13ರಂದು ಬೆಳಿಗ್ಗೆ 11 ಗಂಟೆಗೆ ಕನ್ನಡ ಭವನದ ನಯನ ರಂಗಮಂದಿರದಲ್ಲಿ ಸಾಹಿತಿಗಳಾದ ಸಿ.ಕೆ.ವೆಂಕಟರಾಮಯ್ಯ, ಗೌರೀಶ್ ಕಾಯ್ಕಿಣಿ, ಅ.ನ.ಕೃಷ್ಣರಾಯ, ಕೋ.ಚನ್ನಬಸಪ್ಪ ಹಾಗೂ ಸಿದ್ದಲಿಂಗಯ್ಯ ಅವರ ಸಮಗ್ರ ಸಾಹಿತ್ಯ ಸಂಪುಟಗಳ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕೊಪ್ಪಳದ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರು ಕೃತಿಗಳನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಮದಾರ ಸಂಪುಟ ಕುರಿತು ಮಾತನಾಡುವರು ಹಾಗೂ ಪ್ರಾಧಿಕಾರದ ಅಧ್ಯಕ್ಷ ಮಾನಸ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT