
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕ ಅಂಧರ ಸಾಹಿತ್ಯ ಪರಿಷತ್ತಿನಿಂದ ಇದೇ 27ರಂದು ಎಚ್‌ಎಸ್‌ಆರ್ ಬಡಾವಣೆಯಲ್ಲಿರುವ ಸಮರ್ಥನಂ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಅಂಧರ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಅಧ್ಯಕ್ಷ ಮುದಿಗೆರೆ ರಮೇಶ್ ಕುಮಾರ್, ‘ಆಧುನಿಕ ಕನ್ನಡ ಸಾಹಿತ್ಯಕ್ಕೆ ಅಂಧ ಬರಹಗಾರರ ಕೊಡುಗೆಗಳು, ಅಂಧತ್ವ ಮತ್ತು ಸಾಹಿತ್ಯ ಸಂಕಥನಗಳು ಎಂಬ ಗೋಷ್ಠಿಗಳು ನಡೆಯಲಿವೆ. ವಿಮರ್ಶಕಿ ಎಚ್.ಎಲ್. ಪುಷ್ಪ ಅಧ್ಯಕ್ಷತೆಯಲ್ಲಿ ಅಂಧರ ಕವಿಗೋಷ್ಠಿ ನಡೆಯಲಿದೆ’ ಎಂದರು.
ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ, ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಬಂಜಗೆರೆ ಜಯಪ್ರಕಾಶ್, ಸಚಿವ ಶಿವರಾಜ ತಂಗಡಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಕವಿ ಎಲ್. ಹನುಮಂತಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.