ADVERTISEMENT

ಹಂಪನಾಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 16 ಮೇ 2025, 15:59 IST
Last Updated 16 ಮೇ 2025, 15:59 IST
ಹಂಪ ನಾಗರಾಜಯ್ಯ 
ಹಂಪ ನಾಗರಾಜಯ್ಯ    

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿಗೆ ಸಾಹಿತಿ ಹಂಪ ನಾಗರಾಜಯ್ಯ ಆಯ್ಕೆಯಾಗಿದ್ದಾರೆ. 

ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಕಂಚಿನ ಫಲಕ ಒಳಗೊಂಡಿದೆ. ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. 

ಜೂನ್ 11ರಂದು ಇಲ್ಲಿನ ಕನ್ನಡ ಭವನದಲ್ಲಿರುವ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ. ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ಅವರು ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ. ಕವಿ ಪಿ. ಮಲ್ಲಿಕಾರ್ಜುನಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಎಂದು ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ  ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.