ADVERTISEMENT

ಶಶಿಕಲಾ ಸೇರಿ ಐವರಿಗೆ ‘ಕನ್ನಡ ನಿತ್ಯೋತ್ಸವ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2023, 15:52 IST
Last Updated 7 ಸೆಪ್ಟೆಂಬರ್ 2023, 15:52 IST
   

ಬೆಂಗಳೂರು: ಆದರ್ಶ ಸುಗಮ ಸಂಗೀತ ಅಕಾಡೆಮಿ ನೀಡುವ 2023ನೇ ಸಾಲಿನ ‘ಕನ್ನಡ ನಿತ್ಯೋತ್ಸವ ಪ್ರಶಸ್ತಿ’ಗೆ ಗಾಯಕಿ ಶಶಿಕಲಾ ಸುನಿಲ್ ಸೇರಿ ಐವರು ಆಯ್ಕೆಯಾಗಿದ್ದಾರೆ.

ಕವಿ ಮಹಿಪಾಲ್ ರೆಡ್ಡಿ, ವೀಣಾ ಮ್ಯೂಸಿಕಲ್ಸ್‌ ಮಾಲೀಕ ಪಿ. ನಾಗರಾಜ್, ಕನ್ನಡ ಕಾರ್ಯಕರ್ತ ಜಾವಗಲ್ ಪ್ರಸನ್ನ ಕುಮಾರ್ ಹಾಗೂ ರಂಗಕರ್ಮಿ ಬೆಳ್ಳಿಚುಕ್ಕಿ ವೀರೇಂದ್ರ ಅವರು ‍ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಲ್ಲಿನ ಗವಿಪುರದ ಗುಟ್ಟಹಳ್ಳಿಯಲ್ಲಿರುವ ಉದಯಭಾನು ಕಲಾಸಂಘದಲ್ಲಿ ಇದೇ ಭಾನುವಾರ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಕಾಂಗ್ರೆಸ್ ಮುಖಂಡ ಬಿ.ಕೆ. ಚಂದ್ರಶೇಖರ್ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಬಸವನಗುಡಿ ಶಾಸಕ ಎಲ್.ಎ. ರವಿ ಸುಬ್ರಹ್ಮಣ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಸಮಾರಂಭದಲ್ಲಿ ನಾಡಿನ ಖ್ಯಾತ ಕಲಾವಿದರಿಂದ ಸುಗಮ ಸಂಗೀತ ಗಾಯನ, ಎಚ್‌.ಬಿ. ಜಯರಾಂ, ರಾಘವೇಂದ್ರ ಜೋಶಿ, ಜೈಕುಮಾರ್ ತಂಡದಿಂದ ವಾದ್ಯ ವೈಭವ ಹಾಗೂ ಅಕಾಡೆಮಿಯ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.