ADVERTISEMENT

ರಾಷ್ಟ್ರೋತ್ಥಾನ ಸಾಹಿತ್ಯಕ್ಕೆ ‘ಅಂಕಿತ ಪುಸ್ತಕ ದತ್ತಿ ಪ‍್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 15:57 IST
Last Updated 4 ಆಗಸ್ಟ್ 2021, 15:57 IST

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಅತ್ಯುತ್ತಮ ಪ್ರಕಾಶನ ಸಂಸ್ಥೆಗೆ ನೀಡುವ 2021ನೇ ಸಾಲಿನ ‘ಅಂಕಿತ ಪುಸ್ತಕ ದತ್ತಿ ಪ್ರಶಸ್ತಿ’ಗೆ ರಾಷ್ಟ್ರೋತ್ಥಾನ ಸಾಹಿತ್ಯ ಆಯ್ಕೆಯಾಗಿದೆ.

‍ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಈ ಆಯ್ಕೆ ನಡೆದಿದೆ. ಪ್ರಶಸ್ತಿಯು ₹ 35 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ರಾಷ್ಟ್ರೋತ್ಥಾನ ಸಾಹಿತ್ಯವು ಕಳೆದ 56 ವರ್ಷಗಳಿಂದ ಕೃತಿಗಳನ್ನು ಪ್ರಕಟಿಸುತ್ತಿದೆ. ಇದುವರೆಗೆ ಒಟ್ಟು 750 ಮೌಲಿಕ ಕೃತಿಗಳನ್ನು ಹೊರತಂದಿದೆ. ಸ್ವಾತಂತ್ರ್ಯ ಹೋರಾಟ, ದೇಶಭಕ್ತಿ, ಜೀವನ ಚರಿತ್ರೆ, ವ್ಯಕ್ತಿತ್ವ ವಿಕಸನ, ಧಾರ್ಮಿಕ, ಆಧ್ಯಾತ್ಮಿಕ, ಯೋಗ ಕುರಿತಾದ ಕೃತಿಗಳನ್ನು ಹೊರತಂದಿದೆ.

ಇದೇ 17ರಂದು ಸಂಜೆ 4 ಗಂಟೆಗೆ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.