ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ 2025ನೇ ಸಾಲಿನ ‘ಎಂ.ಎಲ್. ಮಾದಯ್ಯ ದತ್ತಿ ಪ್ರಶಸ್ತಿ’ಗೆ ಕೋಲಾರದ ಸಿವಿಲ್ ಎಂಜಿನಿಯರ್ ಎಂ.ಕೃಷ್ಣ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ದತ್ತಿ ದಾನಿ ಎಂ.ಎಲ್. ಮಾದಯ್ಯ ಅವರ ಆಶಯದಂತೆ ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.
ಎಂ.ಕೃಷ್ಣ ಅವರು ಜಲಸಂಪನ್ಮೂಲ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ 145 ಕೆರೆಗಳಿಗೆ ನೀರು ತುಂಬಿಸಿ, ಅಂತರ್ಜಲ ವೃದ್ಧಿ ಮಾಡುವ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಕ್ಕಾಗಿ ಅವರು ರಾಜ್ಯ ಸರ್ಕಾರ, ಕೇಂದ್ರ ಹಣಕಾಸು ಸಚಿವರು ಹಾಗೂ ವಿಶ್ವಸಂಸ್ಥೆಯ ತಾಂತ್ರಿಕ ತಂಡದಿಂದ ಪ್ರಶಂಸೆ ಪಡೆದಿದ್ದಾರೆ.
ಕಸಾಪದ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಜೂನ್ 3ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ ಮಾಧ್ಯಮ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.