ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ.ಎಚ್.ವಿಶ್ವನಾಥ್ ಮತ್ತು ಎಂ.ಎಸ್.ಇಂದಿರಾ ದತ್ತಿ ಪ್ರಶಸ್ತಿ’ಗೆ ಬಸವಾನಂದ ಸ್ವಾಮೀಜಿ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಅಂಧ ಬರಹಗಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಎಚ್.ವಿಶ್ವನಾಥ್ ಅವರು ಈ ಪುರಸ್ಕಾರವನ್ನು ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ.
ಧಾರವಾಡದ ಮನುಗುಂಡಿ ಗುರುಬಸವ ಮಹಾಮನೆಯ ಬಸವಾನಂದ ಸ್ವಾಮೀಜಿ ಅವರು, ಯೋಗ ಮತ್ತು ನಿಸರ್ಗ ಚಿಕಿತ್ಸಯ ಮೂಲಕ ಜನಮನ್ನಣೆ ಪಡೆದಿದ್ದಾರೆ. ಅಂಧರಾದ ಅವರು, ಸಂಗೀತವನ್ನು ಕಲಿಯುವ ಜತೆಗೆ ಶಿಕ್ಷಕರಾಗಿ ವೃತ್ತಿ ಆರಂಭಿಸಿದ್ದರು. ಬಳಿಕ ಲಿಂಗಾನಂದ ಸ್ವಾಮೀಜಿ ಅವರಿಂದ ಜಂಗಮ ದೀಕ್ಷೆಯನ್ನು ಪಡೆದರು. ಗುರುಬಸವ ಮಹಾಮನೆಯಲ್ಲಿ ಹಲವು ರಚನಾತ್ಮಕ ಕಾರ್ಯಗಳಲ್ಲಿ ತೊಡಗಿರುವುದು ಮಾತ್ರವಲ್ಲದೆ, ವಚನ ಸಾಹಿತ್ಯದ ಕುರಿತು ಹಲವು ಪ್ರಮುಖ ಕೃತಿಗಳನ್ನು ಅವರು ರಚಿಸಿದ್ದಾರೆ ಎಂದು ಕಸಾಪ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.