ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) 54 ವಿವಿಧ ದತ್ತಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಆಹ್ವಾನಿಸಿದೆ.
2024ರ ಜನವರಿ 1ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳುಹಿಸಿ ಕೊಡಬಹುದಾಗಿದೆ. ಕಾದಂಬರಿ, ಕಥಾ ಸಂಕಲನ, ಅನುವಾದ, ಸಂಶೋಧನೆ, ಮಕ್ಕಳ ಸಾಹಿತ್ಯ, ವೈಚಾರಿಕ ಬರಹಗಳು, ವೈದ್ಯಕೀಯ ಸಾಹಿತ್ಯ, ಇತಿಹಾಸ, ಜಾನಪದ, ಮನೋವಿಜ್ಞಾನ, ಸಿನಿಮಾ ಸಾಹಿತ್ಯ ಸೇರಿ ವಿವಿಧ ಪ್ರಕಾರಗಳ ಸಾಹಿತ್ಯ ಕೃತಿಗಳನ್ನು ದತ್ತಿ ಪ್ರಶಸ್ತಿಗಳಿಗೆ ಪರಿಗಣಿಸಲಾಗುತ್ತದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿಗೆ ಪುಸ್ತಕ ಸಲ್ಲಿಸುವವರು ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಕಡ್ಡಾಯವಾಗಿ ಹೊಂದಿರಬೇಕು. ಇಲ್ಲವಾದಲ್ಲಿ ಸದಸ್ಯತ್ವ ಪಡೆದು, ಪುಸ್ತಕ ಕಳುಹಿಸಬಹುದು. ಪರಿಷತ್ತಿನ ಯಾವುದೇ ಪುಸ್ತಕ ಪ್ರಶಸ್ತಿ ಪುರಸ್ಕೃತರು ತಾವು ಪ್ರಶಸ್ತಿ ಪಡೆದ ವಿಭಾಗಕ್ಕೆ ಮೂರು ವರ್ಷ ಅರ್ಜಿ ಸಲ್ಲಿಸುವಂತಿಲ್ಲ. ಪ್ರತಿ ವಿಭಾಗಕ್ಕೂ ಪ್ರತ್ಯೇಕ ಮೂರು ಪುಸ್ತಕಗಳನ್ನು ಸಲ್ಲಿಸಬೇಕು ಎಂದು ಹೇಳಿದ್ದಾರೆ.
ಪುಸ್ತಕಗಳ ಪ್ರತಿಗಳು ಯಾವ ದತ್ತಿಗೆ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು, ಜುಲೈ 20ರೊಳಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560 018 ಈ ವಿಳಾಸಕ್ಕೆ ಕಳುಹಿಸಬೇಕು.
ಸಂಪರ್ಕ ಸಂಖ್ಯೆ: 080 26612991 ಅಥವಾ 26623548
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.